Connect with us

    LATEST NEWS

    ಸುಪ್ರೀಂಕೋರ್ಟ್ ನಲ್ಲಿ ಪಟ್ಟು ಬಿಡದ ರೋಹಿಣಿ ಸಿಂಧೂರಿ..ಡಿ.ರೂಪಾ ಬೇಷರತ್ ಕ್ಷಮೆ ಕೇಳಲೇಬೆಕು…!!

    ನವದೆಹಲಿ ಜನವರಿ 12: ಕರ್ನಾಟಕದ ಇಬ್ಬರು ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಗಲಾಟೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು ಅಲ್ಲೂ ಕೂಡ ನ್ಯಾಯಾಧೀಶರಿಗೆ ತಲೆನೋವು ತಂದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಕುರಿತು ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಕ್ಷಮೆ ಕೇಳಬೇಕು ಎಂದು ಸುಪ್ರೀಂಕೋರ್ಟ್ ನಲ್ಲಿ ಬಿಗಿಪಟ್ಟು ಹಿಡಿದಿದ್ದಾರೆ.


    ಡಿ.ರೂಪಾ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ರೋಹಿಣಿ ಸಿಂಧೂರಿ ಪರ ವಕೀಲರು, ಮಾನಹಾನಿಯಾಗುವ ರೀತಿಯಲ್ಲಿ ಪೋಸ್ಟ್ ಗಳನ್ನು ಮಾಡಲಾಗಿದೆ ಈ ಹಿನ್ನಲೆಯಲ್ಲಿ ಡಿ.ರೂಪಾ ಬೇಷರತ್ ಕ್ಷಮೆ ಕೋರುವಂತೆ ಒತ್ತಾಯಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಆರೋಪ ಮಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಸಿಂಧೂರಿ ಪರ ವಕೀಲರು, ಹೌದು ಬುದ್ಧಿ ಭ್ರಮಣೆಯಾದವರು ಈ ರೀತಿ ಪೊಸ್ಟ್ ಮಾಡುತ್ತಾರೆ. ಆದರೆ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹೇಳಿಲ್ಲ.

    ಅವಹೇಳನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ಡಿಲೀಟ್ ಮಾಡಬಹುದು. ಆದರೆ ಇಂತಹ ಪೋಸ್ಟ್ ಗಳಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ, ನಾನು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಐಪಿಎಸ್ ಡಿ.ರೂಪಾ ಬೇಷರತ್ ಕ್ಷಮೆ ಕೇಳಬೇಕು ಎಂದು ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ. ವಾದ-ಪ್ರತಿವಾದ ಆಲಿಸಿದ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಮೂರ್ತಿಎ.ಎಸ್ ಓಕಾ, ಒಂದು ತಿಂಗಳ ಸಮಯ ನೀಡಲಾಗುವುದು, ಫೆ.16ಕ್ಕೆ ಮುಂದಿನ ವಿಚಾರಣೆಗೆ ಪಟ್ಟಿ ಮಾಡಲಾಗುವುದು. ಅಲ್ಲಿಯ ತನಕ ಮಧ್ಯಂತರ ಆದೇಶ ಆದೇಶ ಮುಂದುವರಿಯಲಿದೆ. ಯಾರು ಯಾರ ವಿರುದ್ಧವೂ ಆರೋಪ ಪ್ರತ್ಯಾರೋಪ ಮಾಡಬಾರದು. ಸೋಶಿಯಲ್ ಮೀಡಿಯಾದಲ್ಲಿಯೂ ಪೋಸ್ಟ್ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಸೂಚಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply