ಬೆಂಗಳೂರು, ಮೇ 06: ದೆಹಲಿಯ ಮೆಟ್ರೋ ದಲ್ಲಿ ರೊಮ್ಯಾನ್ಸ್ ನಡೆಸುವ ವಿಡಿಯೋಗಳು ಹೆಚ್ಚು ವೈರಲ್ ಆಗುತ್ತಿದ್ದವು. ಆದರೆ ಇದೀಗ ಬೆಂಗಳೂರಿನಲ್ಲೂ ಇದೇ ಚಾಳಿ ಪ್ರಾರಂಭವಾಗಿದ್ದು, ನಮ್ಮ ಮೆಟ್ರೋದಲ್ಲಿ ಯುವಕ ಯುವತಿ ಅಸಭ್ಯವಾಗಿ ವರ್ತಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಮ್ಮ ಮೆಟ್ರೋದ ಬಾಗಿಲು ಬಳಿ ಯುವಕ-ಯುವತಿ ನಿಂತು ತಬ್ಬಿಕೊಂಡಿದ್ದು, ಯುವತಿ ಯುವಕನಿಗೆ ಮುತ್ತು ನೀಡುತ್ತಿರುವ ದೃಶ್ಯವನ್ನು ಪ್ರಯಾಣಿಕ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು KPSB 52 ಎಂಬ ಎಕ್ಸ್ (ಟ್ವಿಟರ್) ಖಾತೆ ಮೂಲಕ ಪೋಸ್ಟ್ ಮಾಡಲಾಗಿದ್ದು “ನಮ್ಮ ಮೆಟ್ರೋದಲ್ಲಿ ಇದೇನು ಅಸಭ್ಯವರ್ತನೆ” ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ “ಬೆಂಗಳೂರು ಮೆಟ್ರೋ ನಿಧಾನವಾಗಿ ದೆಹಲಿ ಮೆಟ್ರೋ ರೀತಿ ಆಗುತ್ತಿದೆ. ಯುವತಿ ಯುವಕನಿಗೆ ಮುತ್ತು ನೀಡುತ್ತಿದ್ದಾಳೆ. ಮೆಟ್ರೋದಲ್ಲಿ ಅಸಭ್ಯ ವರ್ತನೆ ವಿರುದ್ಧ ಕ್ರಮ ಕೈಗೊಳ್ಳಿ” ಎಂದು ಬಿಎಂಆರ್ಸಿಎಲ್ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.