KARNATAKA
ಜಡೆಜಗಳಕ್ಕೆ ಅಲ್ಪ ವಿರಾಮ ಇಟ್ಟ ರಾಜ್ಯ ಸರಕಾರ – ಇಬ್ಬರು ಮಹಿಳಾ ಅಧಿಕಾರಿಗಳಿಗೆ ಹುದ್ದೆ ನೀಡದೇ ವರ್ಗಾವಣೆ

ಬೆಂಗಳೂರು ಫೆಬ್ರವರಿ 21: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಜಡೆಜಗಳಕ್ಕೆ ರಾಜ್ಯ ಸರಕಾರ ಎಂಟ್ರಿಯಾಗಿದ್ದು, ಇಬ್ಬರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಮತ್ತು ಡಿ.ರೂಪಾ ಅವರನ್ನು ವರ್ಗಾವಣೆ ಮಾಡಿದ್ದು, ಯಾವುದೇ ಹುದ್ದೆಯನ್ನು ತೋರಿಸಿಲ್ಲ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಅವರ ನಡುವೆ ನಡೆಯುತ್ತಿರುವ ಗಲಾಟೆ ನಿನ್ನೆ ತೀರಾ ವೈಯುಕ್ತಕ ಮಟ್ಟಕ್ಕೆ ಇಳಿದಿತ್ತು, ಈ ಬೆನ್ನಲ್ಲೆ ಎಚ್ಚೇತ್ತ ಸರಕಾರ ಇದೀಗ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಅಲ್ಲದೆ ಡಿ.ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರನ್ನು ಆಡಳಿತ ಸುಧಾರಣೆ ಮತ್ತು ಸಿಬ್ಬಂದಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
