Connect with us

FILM

ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸಿನೆಮಾಗೆ ನ್ಯೂಸ್ ಆ್ಯಂಕರ್ ಜಾಹ್ನವಿ ಹಿರೋಯಿನ್

ಬೆಂಗಳೂರು ಅಗಸ್ಟ್ 24: ತುಳು ಚಿತ್ರರಂಗದ ಖ್ಯಾತ ನಟ ನಿರ್ದೇಶಕ ಬಿಗ್ ಬಾಸ್ ಖ್ಯಾತಿಯ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ ‘ಅಧಿಪತ್ರ’ ಸಿನಿಮಾ ಇಂದು ಸೆಟ್ಟೇರಿದ್ದು, ನ್ಯೂಸ್ ಆ್ಯಂಕರ್ ಜಾಹ್ನವಿ ಹಿರೋಯಿನ್ ಆಗಿದ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಮುಹೂರ್ತ ನೆರವೇರಿದೆ. ಈಗಾಗಲೇ ತುಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ರೂಪೇಶ್ ಸ್ಯಾಂಡಲ್ವುಡ್ನಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.

ನಟ ರೂಪೇಶ್ ಶೆಟ್ಟಿ ಮಾತನಾಡಿ, ಬಿಗ್ ಬಾಸ್ ಆದ್ಮೇಲೆ ಕನ್ನಡ ಸಿನಿಮಾ ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಬಿಗ್ ಬಾಸ್ ಗೂ ಮುಂಚೆ ಸರ್ಕಸ್ ಎಂಬ ತುಳು ಸಿನಿಮಾ ನಿರ್ದೇಶನ ಮಾಡಿ ನಟಿಸಿದ್ದೆ. ಆ ಚಿತ್ರದ ಕೆಲಸ ತುಂಬಾ ಇತ್ತು. ಈ ಚಿತ್ರದ ಕೆಲಸ ಮುಗಿಸಿ ಬೇರೆ ಸಿನಿಮಾದ ಒಪ್ಪಿಕೊಳ್ಳುವುದು ಎಂದು ತೀರ್ಮಾನ ಮಾಡಿದ್ದೆ. ದೇವರ ದಯೆಯಿಂದ ಆ ಚಿತ್ರ ಹಿಟ್ ಆಗಿದೆ. 150 ಥಿಯೇಟರ್ ಗಳಲ್ಲಿ ಓಡಿದೆ. ಅಧಿಪತ್ರ ಸಿನಿಮಾ ನಿರ್ದೇಶಕರು ಕಥೆ ಹೇಳಿದಾಗ ಇಂಟ್ರೆಸ್ಟ್ ಎನಿಸಿತು. ಅವರ ಮೊದಲ ಸಿನಿಮಾವಾದರೂ ಸ್ಕ್ರೀನ್ ಪ್ಲೇ ವಿವರಿಸಿದಾಗ ಎಷ್ಟು ತಯಾರಾಗಿದ್ದರೂ ಎಂದರೆ ಪ್ರತಿ ಸೀನ್ ಡ್ರಾಯಿಂಗ್ ಮಾಡಿಕೊಂಡಿದ್ದರು. ನನಗೆ ಅದನ್ನು ನೋಡಿ ತುಂಬಾ ಧೈರ್ಯ ಬಂತು. ಅವರಿಗೆ ಒಂದು ವಿಷನ್ ಇದೆ. ಈ ಕಾರಣದಿಂದ ಅಧಿಪತ್ರ ಸಿನಿಮಾ ಒಪ್ಪಿಕೊಂಡಿದ್ದೇನೆ. ಸದ್ಯದಲ್ಲಿ ಈ ಚಿತ್ರಕ್ಕಾಗಿ ನನ್ನ ಗೆಟಪ್ ಬದಲಾಗಲಿದೆ ಎಂದರು.

ನಟಿ ಜಾಹ್ನವಿ ಮಾತನಾಡಿ, ಅಧಿಪತ್ರ ಸಿನಿಮಾ ಈಗ ಶುರುವಾಗಿದೆ. ಇವತ್ತು ಮುಹೂರ್ತ ಆಗಿದೆ. ಈ ರೀತಿ ಒಂದು ಸಿನಿಮಾ ಬರ್ತಿದೆ ಅಂದಾಗಲೇ ತುಂಬಾ ಚೆನ್ನಾಗಿ ಪ್ರಮೋಷನ್ ಸಿಕ್ತಿದೆ. ಟೈಟಲ್ ತುಂಬಾ ಕ್ಯಾಚಿಯಾಗಿದೆ. ನನ್ನ ಪಾತ್ರದ ಹೆಸರು ಬೃಹತಿ. ನನ್ನ ಪಾತ್ರದ ರೀತಿ ಲ್ಲಾ ಪಾತ್ರದ ಹೆಸರು ಕೂಡ ವಿಭಿನ್ನವಾಗಿದೆ. ಈ ಸಿನಿಮಾ ತುಂಬಾ ಪಾಸಿಟಿವ್ ಆಗಿದೆ ಎಂದರು.

ನಿರ್ದೇಶಕ ಚಹನ್ ಶೆಟ್ಟಿ ಮಾತನಾಡಿ, ರೂಪೇಶ್ ಶೆಟ್ಟಿ ಹುಟ್ಟಹಬ್ಬಕ್ಕೆ ಟೈಟಲ್ ಅನೌನ್ಸ್ ಮಾಡಿದ್ದೆವು. ಆ ದಿನವೇ ನಮಗೆ ಒಳ್ಳೆ ಪ್ರೋತ್ಸಾಹ ಸಿಕ್ಕಿದೆ. ರೂಪೇಶ್ ಶೆಟ್ಟಿ ಅವರ ಹಿಂದಿನ ಸಿನಿಮಾಗಳಿಗಿಂತ ಈ ಚಿತ್ರದಲ್ಲಿ ವಿಭಿನ್ನ ಪಾತ್ರ ನಿರ್ವಹಿಸಲಿದ್ದಾರೆ. ಗಣೇಶ್ ಹಬ್ಬದ ಬಳಿಕ ಶೂಟಿಂಗ್ ಶುರುವಾಗಲಿದೆ. ಚಿತ್ರದಲ್ಲಿ ಎರಡು ಹಾಡುಗಳಿವೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹಿರಾತು ಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ, ಅಧಿಪತ್ರ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *