DAKSHINA KANNADA
ಕಡಲು ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಮಂಗಳೂರು, ಆಗಸ್ಟ್ 07: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ.
ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You must be logged in to post a comment Login