Connect with us

DAKSHINA KANNADA

ಗಲಾಟೆ ನಿಲ್ಲಿಸಲು ಹೋದ ಪೊಲೀಸರ ಮೇಲೆ ರೌಡಿಯಿಂದ ಹಲ್ಲೆ….!!

ಬಂಟ್ವಾಳ ಜುಲೈ 10: ಗಲಾಟೆ ನಿಲ್ಲಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಯೊಬ್ಬ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳದ ಮೆಲ್ಕಾರ್ ಎಂಬಲ್ಲಿ ನಡೆದಿದೆ. ಪೊಲೀಸರ ಮೇಲೆ ಹಲ್ಲೆ ನಡೆಸಿದ ರೌಡಿ ಅಬ್ದುಲ್ ಸಲಾಂ ಎಂದ ಗುರುತಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ನಿನ್ನೆ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕ ಹಾಗೂ ಸಾರ್ವಜನಿಕರ ನಡುವೆ ಗಲಾಟೆ ನಡೆಯುತ್ತಿದೆ ಎಂಬ ಮಾಹಿತಿ ಹಿನ್ನಲೆ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಶೈಲೇಶ್ ಟಿ ಹಾಗೂ ಸಿಬ್ಬಂದಿಗಳು ತೆರಳಿದ್ದರು. ಈ ಸಂದರ್ಭ ಸ್ಥಳದಲ್ಲಿ ರೌಡಿ ಅಬ್ದುಲ್ ಸಲಾಂ ಕೈಯಲ್ಲಿ ಕಬ್ಬಿಣದ ರಾಡ್ ನ್ನು ಹಿಡಿದು ಸಾರ್ವಜನಿಕರೊಂದಿಗೆ ಗಲಾಟೆ ಮಾಡುತ್ತಿದ್ದ . ಗಲಾಟೆಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ ಆ ವ್ಯಕ್ತಿಯು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿ ಕೈಯಲ್ಲಿದ್ದ ಮಾರಕಾಯುಧವಾದ ಕಬ್ಬಿಣದ ರಾಡಿನಲ್ಲಿ ಏಕಾಏಕಿಯಾಗಿ ಪೊಲೀಸರಿಗೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಸ್ಥಳದಲ್ಲಿದ್ದ ಪೊಲೀಸ್ ವಾಹನವನ್ನು ರಾಡ್ ನಿಂದ ಹೊಡೆದು ಜಖಂಗೊಳಿಸಿದ್ದಾನೆ.
ಕೂಡಲೇ ಸ್ಥಳದಲ್ಲಿ ಸ್ಥಳೀಯರು ಆರೋಪರಿಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಈ ಘಟನೆಯಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕ ರಾದ ಶೈಲೇಶ್ ಟಿ ಮತ್ತು ಇತರ 3 ಪೊಲೀಸರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಆರೋಪಿಗೂ ಸಣ್ಣಪುಟ್ಟ ಗಾಯಗಳಾಗಿರುವ ಹಿನ್ನಲೆ ಆರೋಪಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Facebook Comments

comments