LATEST NEWS
ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ರೌಡಿ ಶೀಟರ್ ಪೊಲೀಸ್ ವಶಕ್ಕೆ
ಮಂಗಳೂರು: ನಗರದ ಪಡೀಲ್ ಸಮೀಪ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಮನೆಯೊಂದರಲ್ಲಿ ಮದ್ಯಪಾನ ಮಾಡಿ ರೌಡಿಶೀಟರೊಬ್ಬ ವಿನಾಕಾರಣ ದಾಂಧಲೆ ನಡೆಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ರೌಡಿಶೀಟರ್ ಗೌರೀಶ್ ಆರೋಪಿಯಾಗಿದ್ದು, ಈತ ಪಡೀಲ್ ಹೋಂಸ್ಟೇ ಬಳಿ ಮನೆಯೊಂದರಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿದ್ದ. ಈ ಸಂದರ್ಭ ಮದುವೆ ಕಾರ್ಯಕ್ರಮಕ್ಕೆ ಬಂದಿದ್ದ ನೆಂಟರ ಜತೆ ರೌಡಿಶೀಟರ್ ತಗಾದೆ ತೆಗೆದು ಮೂವರಿಗೆ ಹಲ್ಲೆ ನಡೆಸಿದ್ದಾನೆ.
ಆತನನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ನಾನಾ ಪ್ರಕರಣಗಳಿವೆ. ಈ ಹಿಂದೆ ಪೊಲೀಸರಿಗೂ ಈತ ಹಲ್ಲೆಗೆ ಯತ್ನಿಸಿದ್ದ. ಈ ಘಟನೆಯಿಂದ ಮೂವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Facebook Comments
You may like
-
ಕಟ್ಟಿಗೆಯಲ್ಲಿ ಹಲ್ಲೆ ಮಾಡಿ ತಂದೆಯನ್ನೇ ಕೊಲೆ ಮಾಡಿದ ಮಗ
-
ಅನುಮತಿ ಇಲ್ಲದೆ ಡ್ರೋನ್ ಬಳಸಿದರೆ ಕಠಿಣ ಕ್ರಮ – ಪೊಲೀಸ್ ಆಯುಕ್ತರ ಎಚ್ಚರಿಕೆ
-
ಸಹಾಯದ ನೆಪದಲ್ಲಿ ಮದ್ಯವಯಸ್ಸಿನ ಮಹಿಳೆ ಹಾಗೂ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ..ಎಸ್ ಡಿಪಿಐ ಮುಖಂಡನ ಮೇಲೆ ಪೋಕ್ಸೋ ಪ್ರಕರಣ ದಾಖಲು
-
ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕೊಳೆತ ಭ್ರೂಣದ ಅವಶೇಷ ಪತ್ತೆ..!!
-
ಪುತ್ತೂರು ಅಕ್ರಮ ಗಾಂಜಾ ಸಾಗಾಟಕ್ಕೆ ಯತ್ನ – 40 ಸಾವಿರ ಮೌಲ್ಯದ ಗಾಂಜಾ ವಶಕ್ಕೆ ಪಡೆದ ಪೊಲೀಸರು
-
ಕುಂಬಳೆ ಮೂಲದ ಯುವಕನಿಗೆ ಹನಿಟ್ರ್ಯಾಪ್ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಪೊಲೀಸ್ ವಶಕ್ಕೆ
You must be logged in to post a comment Login