ಮಂಗಳೂರು ಸೆಪ್ಟೆಂಬರ್ 23: ಸೌಜನ್ಯಪರ ಹೋರಾಟ ಗಾರ ಮಹೇಶ್ ಸೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ದಕ್ಷಿಣಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.

ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಸುಮಾರು 32 ಪ್ರಕರಣಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಲಾಗಿದೆ. ಬುರುಡೆ ಪ್ರಕರಣ ಹಾಗೂ ಶವ ಹೂತಿಟ್ಟ ಪ್ರಕರಣದಲ್ಲಿ ಆರೋಪಿ ಚಿನ್ನಯ್ಯನಿಗೆ ತಿಮರೋಡಿ ಆಶ್ರಯ ನೀಡಿದ್ದರು. ಧರ್ಮಸ್ಥಳ ಪ್ರಕರಣ ಹಾಗೂ ಸೌಜನ್ಯ ಪರ ಹೋರಾಟದಲ್ಲಿ ಸಕ್ರಿಯರಾಗಿರುವ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಇದೀಗ ಹೋರಾಟಕ್ಕೆ ಹಿನ್ನಡೆ ಎಂದು ಹೇಳಲಾಗುತ್ತಿದೆ.



