KARNATAKA
ಜೈಲಲ್ಲಿರುವ ನಟ ದರ್ಶನ್ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದ ರೌಡಿಶೀಟರ್ ಸತ್ಯ ಪೊಲೀಸರ ವಶಕ್ಕೆ..!
ಬೆಂಗಳೂರು : ರೇಣುಕಾಸ್ವಾಮಿಯ ಕೊಲೆ ಆರೋಪದಲ್ಲಿ ಜೈಲಲ್ಲಿರುವ ನಟ ದರ್ಶನ್ ಜೊತೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದ ರೌಡಿಶೀಟರ್ ಸತ್ಯ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟ ದರ್ಶನ್ಗೆ ರೌಡಿಶೀಟರ್ ಸತ್ಯ ವಿಡಿಯೋ ಕಾಲ್ ಮಾಡಿದ್ದು ಆ ವಿಡಿಯೋ ವೈರಲ್ ಆಗಿ ಸಂಚಲನ ಸೃಷ್ಟಿಸಿದೆ. ಜೈಲಿನಲ್ಲಿ ನಿಯಮ ಉಲ್ಲಂಘಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ವಿಡಿಯೋ ಕಾಲ್ ಮಾಡಿದ ಸತ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್ ಸತ್ಯ ಜೊತೆ ದರ್ಶನ್ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಸತ್ಯನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
You must be logged in to post a comment Login