LATEST NEWS
ಒಂದು ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿ ಕರ್ತವ್ಯ

ನವದೆಹಲಿ ಫೆಬ್ರವರಿ 17: ಕಾಲ್ತುಳಿತದಿಂದ 18 ಮಂದಿ ಸಾವನಪ್ಪಿದ ದೆಹಲಿ ರೈಲ್ವೆ ನಿಲ್ದಾಣದಲ್ಲಿ RPF ಮಹಿಳಾ ಸಿಬ್ಬಂದಿಯೊಬ್ಬರು ಪುಟ್ಟಮಗುವನ್ನೊಂದಿಗೆ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ದೆಹಲಿ ರೈಲು ನಿಲ್ದಾಣದಲ್ಲಿ ಕಾನ್‌ಸ್ಟೆಬಲ್ ರೀನಾ ಎಂಬುವವರು ತಮ್ಮ 1 ವರ್ಷದ ಮಗುವನ್ನು ಎದೆಗೆ ಕಟ್ಟಿಕೊಂಡು ಕರ್ತವ್ಯವನ್ನು ನಿರ್ವಹಿಸಿದರು. ನಿಲ್ದಾಣದಲ್ಲಿದ್ದ ಕೆಲ ಪ್ರಯಾಣಿಕರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದು, ಮಹಿಳಾ ಸಿಬ್ಬಂದಿಯ ದ್ವಿಪಾತ್ರ ಮತ್ತು ಸೇವೆಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ರೀನಾರನ್ನು ಹೊಗಳಿದ ಮತ್ತೊಬ್ಬ ಬಳಕೆದಾರರು, “ತಾಯ್ತನ ಮತ್ತು ಕರ್ತವ್ಯ. ವಿವರಿಸಲು ಪದಗಳ ಅಗತ್ಯವಿಲ್ಲ. ಈ ಮಹಿಳಾ ಆರ್‌ಪಿಎಫ್ ಕಾನ್‌ಸ್ಟೆಬಲ್‌ಗೆ ಹೆಚ್ಚಿನ ಶಕ್ತಿ ನೀಡಲಿ. ಅವರ ಸೇವೆಯ ಸಮರ್ಪಣೆಗೆ ನಮನ” ಎಂದು ಬರೆದಿದ್ದಾರೆ.