LATEST NEWS
ಆಕ್ರೋಶದ ಬೆನ್ನಲ್ಲೆ ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾಂಗಲ್ಯಕ್ಕಿದ್ದ ನಿರ್ಬಂಧ ತೆಗೆದುಹಾಕಿದ ರೈಲ್ವೆ ಮಂಡಳಿ

ಮಂಗಳೂರು ಎಪ್ರಿಲ್ 28: ಎಪ್ರಿಲ್ 29ರಂದು ದೇಶಾದ್ಯಂತ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಭಾರತೀಯ ರೈಲ್ವೇ ಪರೀಕ್ಷೆ ಹಮ್ಮಿಕೊಂಡಿದ್ದು ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಯಾವುದೇ ಧಾರ್ಮಿಕ ಚಿಹ್ನೆಗಳನ್ನೂ ಧರಿಸುವಂತಿಲ್ಲ. ಅಲ್ಲದೆ, ಮಂಗಳಸೂತ್ರ, ಜನಿವಾರ, ಬಳೆ, ತಿಲಕ ಇನ್ನಿತರ ಎಲ್ಲ ಸಂಕೇತಗಳನ್ನು ತೆಗೆದಿಟ್ಟು ಪರೀಕ್ಷಾ ಕೊಠಡಿಗೆ ಬರಬೇಕೆಂದು ಸೂಚನೆ ನೀಡಲಾಗಿತ್ತು. ಈ ಬಗ್ಗೆ ಆಕ್ಷೇಪ ಕೇಳಿಬರುತ್ತಿದ್ದಂತೆ ವಿಶ್ವ ಹಿಂದು ಪರಿಷತ್ ಮುಖಂಡರು ಸಂಸದ ಚೌಟ ಮತ್ತು ಜಿಲ್ಲಾಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಬೇಕು. ಹಿಂದು ಧಾರ್ಮಿಕ ಸಂಕೇತ ತೆರವು ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದ್ದರು.
ಇದೀಗ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರೈಲ್ವೆ ನೇಮಕಾತಿ ಮಂಡಳಿಯು ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ಮೊದಲು ನೀಡಿದ್ದ ಮಾರ್ಗಸೂಚಿಗಳನ್ನು ಬದಲಿಸಿ ಹೊಸ ಮಾರ್ಗಸೂಚಿಯನ್ನು ಮಂಡಳಿಯು ಹೊರಡಿಸಿದೆ.

ನೂತನ ಮಾರ್ಗಸೂಚಿಯ ಪ್ರಕಾರ ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದು, ಪ್ರವೇಶ ನೀಡಬೇಕು ಎಂದು ಸೂಚನೆ ನೀಡಲಾಗಿದೆ.ಎಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂದು ಈ ಹಿಂದೆ ಆಕ್ರೋಶ ವ್ಯಕ್ತವಾಗಿತ್ತು.