ತಿರುಪತಿ ಸೆಪ್ಟೆಂಬರ್ 22: ವೈಎಸ್ ಆರ್ ಕಾಂಗ್ರೇಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದಲ್ಲಿ ಭಕ್ತರು ಹಾಕಿದ್ದ ಹಣದಲ್ಲಿ 100 ಕೋಟಿಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಎಂದು ಬಿಜೆಪಿ ಮುಖಂಡರೊಬ್ಬರು ಸಿಸಿಟಿವಿ ವಿಡಿಯೋ ಸಹಿತ ಆರೋಪಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ. ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ಮನೆ, ತಾಡೆಪಲ್ಲಿ ಪ್ಯಾಲೇಸ್‌ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
2019 ರಿಂದ 2024 ರವರೆಗೆ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ ಅತ್ಯಧಿಕ ರೂ. 100 ಕೋಟಿ ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರಿರುವ ಟಿಡಿಪಿ ನಾಯಕ ನಾರಾ ಲೋಕೇಶ್ , ತಮ್ಮ ಎಕ್ಸ್ ಖಾತೆಯಲ್ಲಿ ‘ಲೂಟಿ’ ತೋರಿಸುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಭಕ್ತರು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದ ಹಣವನ್ನು ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಹೇಳಿದ್ದಾರೆ.
#YCPTirumalaMahaPapam
వైసిపి గజదొంగలు శ్రీవారి సొత్తూ దోచుకున్నారు. వందకోట్ల పరకా’మనీ దొంగ’ వెనుక వైసీపీ నేతలుజగన్ ఐదేళ్ల పాలనలో అవినీతి రాజ్యమేలింది. అరాచకం పెచ్చరిల్లింది. దొంగలు, దోపిడీదారులు, మాఫియా డాన్లకు ఏపీని కేరాఫ్ అడ్రస్ చేసారు జగన్. గనులు, భూములు, అడవులు, సమస్త… pic.twitter.com/Pwssua12YM
— Lokesh Nara (@naralokesh) September 20, 2025
ಹೈಕೋರ್ಟ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದು, ಒಂದು ತಿಂಗಳೊಳಗೆ ತನಿಖೆ ಮತ್ತು ಮುಚ್ಚಿದ ಕವರ್ ವರದಿಯನ್ನು ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ರೆಡ್ಡಿ ಹೇಳಿದರು.



