LATEST NEWS
ಮಳೆಯಿಂದ ಮೃತರ ಕುಟುಂಬಗಳಿಗೆ ಪರಿಹಾರ ವಿತರಣೆ

ಮಳೆಯಿಂದ ಮೃತರ ಕುಟುಂಬಗಳಿಗೆ ಪರಿಹಾರ ವಿತರಣೆ
ಮಂಗಳೂರು ಮೇ 30: ನಿನ್ನೆ ಸುರಿದ ಭಾರಿ ಮಳೆಗೆ ಸಾವನಪ್ಪಿದ ಇಬ್ಬರು ಮೃತರ ಕುಟುಂಬಗಳಿಗೆ ಪರಿಹಾರವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಇಂದು ಬೆಳಿಗ್ಗೆ ವಿತರಿಸಿದರು.
ನಿನ್ನೆ ಸುರಿದ ಭಾರಿ ಮಳೆ ಮಂಗಳೂರು ನಗರದಲ್ಲಿ ಇಬ್ಬರನ್ನು ಬಲಿ ಪಡೆದಿತ್ತು. ಮಂಗಳೂರಿನ ಕೆಪಿಟಿ ಉದಯ ನಗರದ ನಿವಾಸಿ ಮೋಹಿನಿ ಹಾಗೂ ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜ ಸಮೀಪದ ಮುಕ್ತ ಇವರು ಭಾರಿ ಮಳೆಯಿಂದಾಗಿ ಮೃತಪಟ್ಟಿದ್ದರು. ಮೃತರ ಕುಟುಂಬಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ತಲಾ 5 ಲಕ್ಷ ರೂಪಾಯಿಗಳ ಪರಿಹಾರವನ್ನು ವಿತರಿಸಿದರು.
