DAKSHINA KANNADA
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

ಮಂಗಳೂರು, ಎಪ್ರಿಲ್ 05: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಲ್ಲಡ್ಕದ ತನ್ನ ವಿದ್ಯಾಸಂಸ್ಥೆಯಲ್ಲಿದ್ದಾಗ ಪ್ರಭಾಕರ್ ಭಟ್‌ಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಮಂಗಳೂರಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರಿಂದ ಪ್ರಭಾಕರ್ ಭಟ್ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.

ಕೆಲ ದಿನಗಳ ಹಿಂದೆ ಮಂಗಳೂರು ವಿವಿ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಪ್ರಭಾಕರ್ ಭಟ್ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆ ಕಾರ್ಯಕ್ರಮಕ್ಕೆ ಪ್ರಭಾಕರ್ ಭಟ್ ಆಗಮಿಸಿದ್ದರುರೀ ವೇಳೆ ವಿಶ್ವವಿದ್ಯಾಲಯದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಗೋಬ್ಯಾಕ್ ಎಂದು ಪ್ರತಿಭಟನೆ ನಡೆಸಲಾಗಿತ್ತು.