LATEST NEWS
ಕುತೂಹಲ ಮೂಡಿಸಿದ ಆರ್ ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ದಕ್ಷಿಣಕನ್ನಡ ಭೇಟಿ

ಕುತೂಹಲ ಮೂಡಿಸಿದ ಆರ್ ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ದಕ್ಷಿಣಕನ್ನಡ ಭೇಟಿ
ಮಂಗಳೂರು ಮಾರ್ಚ್ 26: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಇಂದು ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕಕ್ಕೆ ಮೋಹನ್ ಭಾಗವತ್ ಭೇಟಿ ನೀಡುತ್ತಿರುವುದು ಕುತೂಹಲ ಕೆರಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಮೈತ್ರೆಯೀ ಗುರುಕುಲಂ ಗೆ ನಾಳೆ ಸಂಜೆ ಭೇಟಿ ನೀಡಲಿರುವ ಮೋಹನ್ ಭಾಗವತ್, ಗುರುಕುಲದಲ್ಲಿ ಅರ್ಧಮಂಡಲೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅವರೊಂದಿಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗೂರೂಜಿ , ಅದಿ ಚುಂಚನಗಿರಿ ಮಹಾಸಂಸ್ಥಾನದ ನಿರ್ಮಾಲನಂದ ನಾಥ ಸ್ವಾಮಿಜಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋಹನ್ ಬಾಗವತ್ ಅವರ ಈ ಭೇಟಿ ಕುತೂಹಲ ಕೆರಳಿಸಿದ್ದು, ಮುಂಬರುವ ಚುನಾವಣೆಯ ತಂತ್ರಗಾರಿಕೆಯ ಭಾಗವೇ ಎಂಬ ಪ್ರಶ್ನೆ ಮೂಡಿದೆ.
ಮೋಹನ್ ಭಾಗವತ್ ಅವರೊಂದಿಗೆ ಸುರೇಶ್ ಬಯ್ಯಾಜಿ ಜೋಶಿ ಅವರು ಕೂಡ ಆಗಮಿಸಲಿದ್ದು, ದಕ್ಷಿಣಕನ್ನಡ ಜಿಲ್ಲೆಯ ಸಂಘದ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.