LATEST NEWS
ಕೇರಳ: ಪತ್ನಿ ಎದುರೇ ಆರ್‌ಎಸ್‌ಎಸ್ ಕಾರ್ಯಕರ್ತನ ಇರಿದು ಕೊಲೆ

ಕೇರಳ : ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನೊಬ್ಬನನ್ನು ಆತನ ಪತ್ನಿ ಎದುರೇ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ಸಂಜಿತ್ (27) ಎಂದು ಗುರುತಿಸಲಾಗಿದ್ದು, ಇವರು ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಕುಟುಂಬದೊಂದಿಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹೊಂಚು ಹಾಕಿದ ದಾಳಿಕೋರರು ಅವರ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.

ಸಂಜೀತ್ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತನಾಗಿ ತನ್ನ ಪ್ರದೇಶದಲ್ಲಿ ಸಕ್ರಿಯನಾಗಿದ್ದ ಎಂದು ಹೇಳಲಾಗುತ್ತಿದೆ. ಸಂಜೀತ್‌ನ ದೇಹದ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ 50ಕ್ಕೂ ಹೆಚ್ಚು ಗುರುತುಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿಕೋರರನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.