Connect with us

    LATEST NEWS

    ಮೊದಲ ಹಂತದಲ್ಲಿ ಪಿಯುಸಿ ಆರಂಭ – ವಿಧ್ಯಾರ್ಥಿಗಳಿಗೆ ಆರ್‍ಟಿಪಿಸಿಆರ್ ವರದಿ ಕಡ್ಡಾಯ

    ಮಂಗಳೂರು ಅಗಸ್ಟ್ 24: ದಕ್ಷಿಣಕನ್ನಡದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಸದ್ಯ ಷರತ್ತುಬದ್ದವಾಗಿ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲಾಗುವುದು, ಆದರೆ ವಿಧ್ಯಾರ್ಥಿಗಳು ಕಡ್ಡಾಯವಾಗಿ ಆರ್‍ಟಿಪಿಸಿಆರ್ ವರದಿಯನ್ನು ತರಬೇಕೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.


    ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿಗಳು ಹಾಗೂ ಪಿಯುಸಿ ಪ್ರಾರಂಭಕ್ಕೆ ಸರ್ಕಾರದ ಹಂತದಲ್ಲಿ ಈಗಾಗಲೇ ನಿರ್ಣಯಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‍ಟಿಪಿಸಿಆರ್ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿರಬೇಕು. ಕ್ವಾಂರಟೈನ್‍ನಿಂದ ಹೊರಬಂದ ನಂತರ ಮತ್ತೊಮ್ಮೆ ಆರ್‍ಟಿಪಿಸಿಆರ್ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳು ಕಂಡುಬಂದರೇ ಸ್ಥಳಿಯ ಆಡಳಿತಕ್ಕೆ ಕೂಡಲೇ ತಿಳಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತಿಗೊಳಪಟ್ಟು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು, ಇದರ ಫಲಶ್ರುತಿ ಆಧಾರದ ಮೇಲೆ 9 ಹಾಗೂ 10ನೇ ತರಗತಿಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

    ಈ ಸಂಧಿಗ್ದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಕೋವಿಡ್‍ನಿಂದ ಸುರಕ್ಷಿತವಾಗಿ ಕಾಲೇಜಿಗೆ ಹಾಜರಾಗುವ ಬಗ್ಗೆ ಸಂಬಂಧಿಸಿದ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿಯನ್ನು ಸಿದ್ಧಪಡಿಸಿ, ಅದನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಎಸ್.ಒ.ಪಿಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಅವರು ತಿಳಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *