LATEST NEWS
ಭಾರೀ ಗಾಳಿ ಮಳೆ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಮುನ್ನೆಚ್ಚರಿಕೆ

ಮಂಗಳೂರು, ಜುಲೈ.14: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 14 ರಿಂದ 17 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ.
ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಯಾರೂ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಮುನ್ನೆಚ್ಚರಿಕೆ ನೀಡಿರುತ್ತಾರೆ.

Continue Reading