Connect with us

LATEST NEWS

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 ಕ್ಕೆ ಜಿ.ಪಂ. ಅಧ್ಯಕ್ಷರಿಂದ ಚಾಲನೆ

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2018 ಕ್ಕೆ ಜಿ.ಪಂ. ಅಧ್ಯಕ್ಷರಿಂದ ಚಾಲನೆ

ಉಡುಪಿ, ಜುಲೈ 21: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಮಂತ್ರಾಲಯವು ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2018 ಕ್ಕೆ ನವದೆಹಲಿ ಯಲ್ಲಿ ಚಾಲನೆ ನೀಡಿದ್ದು, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿಯೂ ಸಹ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಈ ಸರ್ವೇಕ್ಷಣೆಗೆ ನಿಯೋಜಿಸಿರುವ ನೋಡಲ್ ಅಧಿಕಾರಿಗಳಿಗೆ ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ, ಜಿಲ್ಲೆಯ ಸರ್ವೇಕ್ಷಣೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಉಡುಪಿ ಜಿಲ್ಲೆಯು ಈಗಾಗಲೇ ಬಯಲು ಮುಕ್ತ ಶೌಚ ಜಿಲ್ಲೆಯಾಗಿದ್ದು, ಈ ಸಾಧನೆಗೆ ಶ್ರಮಿಸಿದ ಎಲ್ಲಾ ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಅಭಿನಂದಿಸಿ, ಪ್ರಸ್ತುತ ನಡೆಯುತ್ತಿರುವ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ದಲ್ಲಿ ಜಿಲ್ಲೆಯು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುವಂತಾಗಲಿ, ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಕಾರ್ಯ ನಿರ್ವಹಿಸಬೇಕು, ಗ್ರಾಮೀಣ ಜನತೆಗೆ ಸಮೀಕ್ಷೆಯ ಕುರಿತು ಜಾಗೃತಿ ಮೂಡಿಸುವಂತೆ ತಿಳಿಸಿದರು.

ಆಗಸ್ಟ್ 1 ರಿಂದ 30 ರ ವರೆಗೆ ದೇಶದ 6980 ಗ್ರಾಮಗಳ 34900 ಸಾರ್ವಜನಿಕ ಸ್ಥಳಗಳಲ್ಲಿ, 50 ಲಕ್ಷ ಜನರ ಅಭಿಪ್ರಾಯ ಸಂಗ್ರಹ ಮೂಲಕ ನಡೆಯುವ ಈ ಸಮೀಕ್ಷೆಯಲ್ಲಿ , ಸಾರ್ವಜನಿಕ ಸ್ಥಳದ ಸಮೀಕ್ಷೆ, ಸ್ವಚ್ಚತೆಯ ಬಗ್ಗೆ ಜನರ ಗ್ರಹಿಕೆ, ಕಾರ್ಯಕ್ರಮ ಸುಧಾರಣೆಗೆ ಜನರ ಶಿಫಾರಸ್ಸುಗಳು ಪ್ರಮುಖ ಮಾನದಂಡಗಳಾಗಿದ್ದು, ನೋಡಲ್ ಆಧಿಕಾರಿಗಳು ತಮ್ಮ ಅಧೀನದ ಪಂಚಾಯತ್ ಗಳಿಗೆ ಈ ಕುರಿತಂತೆ ಸೂಕ್ತ ನಿರ್ದೇಶನ ನೀಡಿ , ಜಿಲ್ಲೆ ಉತ್ತಮ ಸಾಧನೆ ಮಾಡುವಂತೆ ಕಾರ್ಯ ನಿರ್ವಹಿಸುವಂತೆ ದಿನಕರ ಬಾಬು ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಸಮೀಕ್ಷಗೆ ಕೇಂದ್ರದಿಂದ ತಂಡ ಆಗಮಿಸಲಿದ್ದು, ಈ ಸಂದರ್ಭದಲ್ಲಿ ಎಲ್ಲಡೆ ಸ್ವಚ್ಚತೆ ಕಾಪಾಡುವಂತೆ ತಿಳಿಸಿದ ಜಿ.ಪಂ. ಮುಖ್ಯ ಯೋಜನಧಿಕಾರಿ ಶ್ರೀನಿವಾಸ ರಾವ್, ನೋಡಲ್ ಅಧಿಕಾರಿಗಳು , ಗ್ರಾಮದಲ್ಲಿನ ಎಲ್ಲಾ ಮನೆಗಳು ಕಡ್ಡಾಯವಾಗಿ ಶೌಚಾಲಯ ಬಳಸುವದರ ಬಗ್ಗೆ ಖಾತ್ರಿ ಪಡಿಸಿಕೊಳ್ಳುವಂತೆ, ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿನ ಸಮುದಾಯ ಶೌಚಾಲಯದ ಸ್ವಚ್ಛತೆ ಹಾಗೂ ಬಳಕೆ ಬಗ್ಗ ಪರಿಶೀಲನೆ ನಡೆಸುವಂತೆ, ಶಾಲೆ ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಂತೆ ಮಾರುಕಟ್ಟೆ ಸ್ಥಳ ಮತ್ತು ಧಾರ್ಮಿಕ ಸ್ಥಳದಲ್ಲಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ, ಮನೆ ವಾಣಿಜ್ಯ ಸಂಕೀರ್ಣಗಳಲ್ಲಿ ತ್ಯಾಜ್ಯದ ಸೂಕ್ತ ವಿಲೇವಾರಿಗೆ ಮಾರ್ಗದರ್ಶನ ನೀಡುವಂತೆ ತಿಳಿಸಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಸ್ವ ಸಹಾಯ ಸಂಘದ ಸದಸ್ಯರು ಮತ್ತು ಶಾಲಾ ಮಕ್ಕಳ ಮೂಲಕ ಮನೆ ಮನೆಗೆ ಮಾಹಿತಿ ನೀಡಿ, ಕರಪತ್ರ ವಿತರಿಸಲು ಹಾಗೂ ಸ್ಥಳೀಯ ಜಿ.ಪಂ. ತಾ.ಪಂ ಮತ್ತು ಗ್ರಾ.ಪಂ ಜನಪ್ರತಿನಿಧಿಗಳು ಮತ್ತು ಎಸ್‍ಡಿಎಂಸಿ ಸದಸ್ಯರ ಸಹಕಾರ ಪಡೆದು ಕಾರ್ಯ ನಿರ್ವಹಿಸುವಂತೆ ನೋಡಲ್ ಅಧಿಕಾರಿಗಳಿಗೆ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *