LATEST NEWS
ಉಕ್ರೇನ್ ಯುದ್ದದಲ್ಲಿ ಮಧ್ಯಪ್ರವೇಶಿಸದರೆ ಇತಿಹಾಸದಲ್ಲಿ ಎಂದೂ ಅನುಭವಿಸದಂತಹ ಪರಿಣಾಮ – ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ
ಮಾಸ್ಕೊ: ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಘೋಷಣೆಯಾಗಿದ್ದು, ಈಗಾಗಲೇ ಉಕ್ರೇನ್ ಕೆಲವು ಪ್ರಾಂತ್ಯಗಳ ಮೇಲೆ ರಷ್ಯಾ ವಾಯುದಾಳಿ ಆರಂಭಿಸಿದೆ. ಈ ನಡುವೆ ರಷ್ಯಾದ ಕ್ರಮವನ್ನು ಇತರ ದೇಶಗಳು ಖಂಡಿಸಿದ್ದು. ಈ ಹಿನ್ನಲೆ ರಷ್ಯಾ ಅಧ್ಯಕ್ಷ ಯುದ್ದದಲ್ಲಿ ಮಧ್ಯಪ್ರವೇಶಿಸಲು ಯತ್ನಿಸುತ್ತಿರುವ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ್ದಾರೆ. ತನ್ನ ಶಸ್ತ್ರಾಸ್ತ್ರಗಳನ್ನು ತ್ಯಜಿಸುವಂತೆ ಅವರು ಉಕ್ರೇನ್ ನ ಮಿಲಿಟರಿಗೆ ಕರೆ ನೀಡಿದ್ದಾರೆ. ಅಲ್ಲದೆ ರಷ್ಯಾ-ಉಕ್ರೇನ್ ನಡುವಣ ಬಿಕ್ಕಟ್ಟು ಮಿಲಿಟರಿ ಕಾರ್ಯಾಚರಣೆಯಲ್ಲಿ ಮಧ್ಯೆ ಪ್ರವೇಶಿಸಿದವರ ವಿರುದ್ಧ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಕೂಡ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ.
ಇಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಪುಟಿನ್, ನಮ್ಮ ದೇಶ ಮತ್ತು ನಮ್ಮ ಜನರಿಗೆ ಬೆದರಿಕೆ ಉಂಟುಮಾಡಲು ನೋಡಿದರೆ, ನಮ್ಮ ವಿಷಯದಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುವ ಯಾರಿಗಾದರೂ ರಷ್ಯಾದಿಂದ ಪ್ರತಿಕ್ರಿಯೆ ತಕ್ಷಣವೇ ಬರುತ್ತದೆ, ಎಚ್ಚರ ನಿಮ್ಮ ಇತಿಹಾಸದಲ್ಲಿ ನೀವು ಹಿಂದೆಂದೂ ಅನುಭವಿಸದಂತಹ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜಗತ್ತಿನ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.