Connect with us

  FILM

  S/O ಮುತ್ತಣ್ಣ..ಇದು ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ..

  ಬೆಂಗಳೂರು, ಜನವರಿ 08: ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ.

  ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ.

  ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

  ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ.

  S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.

  Share Information
  Advertisement
  Click to comment

  You must be logged in to post a comment Login

  Leave a Reply