LATEST NEWS
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ಪ್ರತಿಭಟನೆ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ ಸುಪ್ರೀಂಕೋರ್ಟ್ ತೀರ್ಪು ವಿರೋಧಿಸಿ ಪ್ರತಿಭಟನೆ
ಕೇರಳ ಅಕ್ಟೋಬರ್ 3: ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿ ಮಹಿಳೆಯರು ಪ್ರವೇಶಿಸಬಹುದು ಸುಪ್ರೀಂಕೋರ್ಟ್ ತೀರ್ಪಿನ ವಿರುದ್ದ ಕೇರಳದಲ್ಲಿ ಭಾರಿ ಪ್ರತಿಭಟನೆ ನಡೆದಿದೆ.
ಕೇರಳದ ಪ್ರಸಿದ್ದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ಇತ್ತೀಚೆಗೆ ತೀರ್ಪು ಪ್ರಕಟಿಸಿತ್ತು. ಇದಕ್ಕೆ ಹಿಂದೆ ದೇವಾಲಯ ನಿಯಮಾವಳಿಯಂತೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರ್ಬಂಧವಿತ್ತು. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಕೊಚ್ಚಿನ್, ತಿರುವನಂತಪುರಂ ಅಲ್ಲದೆ ಕೇರಳದ ಪ್ರಮುಖ ಪ್ರದೇಶಗಳಲ್ಲಿ ಸುಪ್ರೀಂಕೋರ್ಟ್ ನ ತೀರ್ಪಿನ ವಿರುದ್ದ ಭಾರಿ ಪ್ರತಿಭಟನೆ ನಡೆದವು.
ಹಿಂದೂ ಸಂಘಟನೆಗಳು ಕರೆ ನೀಡಿದ್ದ ಈ ಪ್ರತಿಭಟನೆಗೆ ಸಾವಿರಾರು ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿ ಭಕ್ತಾಧಿಗಳು ಭಾಗವಹಿಸಿದ್ದರು. ಕೇರಳದ ಪಂಡಾಲಮ ಎಂಬಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಅಯ್ಯಪ್ಪ ವೃತಧಾರಿಗಳು ಹಾಗೂ ಮಹಿಳೆಯರು ನಾಮಜಪ ಯಾತ್ರೆಯನ್ನು ಈ ಸಂದರ್ಭದಲ್ಲಿ ನೆರವೇರಿಸಿದರು.