Connect with us

    LATEST NEWS

    ಶಬರಿಮಲೆಗೆ ಒಂದೇ ದಿನ ಲಕ್ಷಕ್ಕೂ ಅಧಿಕ ಭಕ್ತರ ಭೇಟಿ….!!

    ಕೇರಳ ಡಿಸೆಂಬರ್ 13: ಶಬರಿಮಲೆ ಅಯ್ಯಪ್ಪ ಯಾತ್ರೆ ಪ್ರಾರಂಭವಾದ ಬಳಿಕ ಒಂದೇ ದಿನ 1 ಲಕ್ಷಕ್ಕೂ ಅಧಿಕ ಭಕ್ತರು ದೇವರ ದರ್ಶನ ಪಡೆದಿದ್ದಾರೆ. ಶಬರಿಮಲೆ ದೇವಸ್ಥಾನಕ್ಕೆ ಡಿಸೆಂಬರ್ 12 ರಂದು 1 ಲಕ್ಷಕ್ಕೂ ಹೆಚ್ಚು ಭಕ್ತರು ಅಯಪ್ಪ ದೇವರಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬಂದೇ ದಿನಕ್ಕೆ 1,07,260 ಮಂದಿ ಶಬರಿಮಲೆ ದೇಗುಲದ ದರ್ಶನಕ್ಕೆ ಬುಕ್ಕಿಂಗ್ ಮಾಡಿದ್ದು ದಾಖಲೆಯ ಪಾದಯಾತ್ರೆಯನ್ನು ಕಂಡಿದೆ.


    ಭಕ್ತರ ದಾಖಲೆ ಪ್ರಮಾಣದ ಭೇಟಿಯಿಂದಾಗಿ ಕಾಲ್ತುಳಿತದಂತಹ ಘಟನೆಗಳು ಆಗದಂತೆ ದೇವಸ್ಥಾನ ಆಡಳಿತ ಮಂಡಳಿ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಂಡಿದೆ. ಭಕ್ತರನ್ನು ಪಂಪಾದಿಂದ ಅಯ್ಯಪ್ಪನ ಸನ್ನಿಧಾನಕ್ಕೆ ಆಗಮಿಸುವ ವರೆಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಇದಕ್ಕಾಗಿ ಪ್ರತಿ ಹಂತದಲ್ಲೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.


    ಈ ನಡುವೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಶಬರಿಮಲೆಗೆ ಆಗಮಿಸುತ್ತಿರುವ ಹಿನ್ನಲೆ ದಿನದ ಭಕ್ತರ ದರ್ಶನ ವ್ಯವಸ್ಥೆಯನ್ನು 90 ಸಾವಿರಕ್ಕೆ ನಿರ್ಭಂಧಿಸಲು ಕೇರಳ ಸರಕಾರ ನಿರ್ಧರಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply