DAKSHINA KANNADA
ಮಮತಾ ಸರಕಾರ ವಜಾ ಮಾಡಿ ಹಿಂಜಸ ಒತ್ತಾಯ

ಮಮತಾ ಸರಕಾರ ವಜಾ ಮಾಡಿ ಹಿಂಜಸ ಒತ್ತಾಯ
ಪುತ್ತೂರು,ಸೆಪ್ಟಂಬರ್ 25: ಕೊಲ್ಕತ್ತಾದಲ್ಲಿ ಮೊಹರಮ್ ಆಚರಣೆಗಾಗಿ ದುರ್ಗಾ ದೇವಿಯ ವಿಸರ್ಜನೆಗೆ ನಿರ್ಬಂಧ ಹೇರಿದ ಮಮತಾ ಬ್ಯಾನರ್ಜಿ ನೇತೃತ್ವದ ಸರಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪುತ್ತೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿತು.ಮಮತಾ ಬ್ಯಾನರ್ಜಿ ಸರಕಾರದ ಆದೇಶಕ್ಕೆ ವಿರುದ್ಧವಾಗಿ ಕೊಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದ್ದರೂ, ಇದನ್ನು ಪ್ರಶ್ನಿಸಿ ಇದೀಗ ಸುಪ್ರೀಂಕೋರ್ಟ್ ಗೆ ಹೋಗುತ್ತಿರುವ ಸರಕಾರವನ್ನು ವಜಾಗೊಳಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುವುದಕ್ಕೋಸ್ಕರ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಮಮತಾ ಬ್ಯಾನರ್ಜಿಯನ್ನು ಅಧಿಕಾರದಿಂದ ಕಿತ್ತೆಸೆದು ಕೊಲ್ಕತ್ತಾದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕೆಂದೂ ಪ್ರತಿಭಟನಾಕಾರರು ಆಗ್ರಹಿಸಿದರು.
ಕೇರಳದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಪ್ರಕರಣಗಳಿಗೂ ತಿಲಾಂಜಲಿ ಹಾಡಬೇಕೆಂಬ ಒತ್ತಾಯವೂ ಕೇಳಿಬಂತು.
