LATEST NEWS
ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ – ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್
ಮಂಗಳೂರು ಮಾರ್ಚ್20: ರಾಷ್ಟ್ರಧ್ವಜದ ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದ ಈಶ್ವರಪ್ಪ ಬಳಿಕ ಇದೀಗ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಹೇಳಿಕೆ ನೀಡಿದ್ದಾರೆ.
ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ಸಿನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಅವರು ಹೇಳಿದರು.
ಇದಕ್ಕೆ ಕಾರಣ ನೀಡಿದ ಅವರು, ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಎಂಬ ಬಗ್ಗೆ ವಿವರಿಸಿದರು. ಮೊದಲು ಬ್ರಿಟಿಷರ ಧ್ಬಜ ಇತ್ತು, ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು. ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್ ನಲ್ಲಿ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ. ಹೀಗೆಯೇ ಮುಂದುವರೆದರೆ ಹಿಂದೂ ಸಮಾಜ ಒಟ್ಟಾಗುತ್ತೆ ಎಂದು ನುಡಿದರು.