FILM
ಸಖತ್ ಹಾಟ್ ಆಗಿ ಫೋಟೋಗೆ ಪೋಸ್ ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್

ಮುಂಬೈ ಡಿಸೆಂಬರ್ 23: ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ತಮ್ಮ ಥಾಯ್ಲೆಂಡ್ ಪ್ರವಾಸದ ಹಾಟ್ ಹಾಟ್ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಇದೀಗ ವೈರಲ್ ಆಗಿದೆ.
ಪತಿ ಹಾಗೂ ಬ್ಯಾಡ್ಮಿಂಟನ್ ಆಟಗಾರ ಪಾರುಪಲ್ಲಿ ಕಶ್ಯಪ್ ಜೊತೆ ಥಾಯ್ಲೆಂಡ್ ಪ್ರವಾಸದಲ್ಲಿದ್ದಾರೆ. ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ತಮ್ಮ ಟ್ರಿಪ್‌ನ ಹಾಟ್ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಭಾರತ ತಂಡದ ಪ್ರಖ್ಯಾತ ಬ್ಯಾಡ್ಮಿಂಟನ್ ತಾರೆ ಹಾಗೂ ಒಲಿಂಪಿಕ್ ಪದಕ ವಿಜೇತೆ ಸೈನಾ ನೆಹ್ವಾಲ್ ಇತ್ತೀಚೆಗೆ ಎಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಮಾತ್ರ ಅವರು ಫುಲ್ ಆಕ್ಟೀವ್ ಆಗಿದ್ದಾರೆ. ಹೊಸ ಡ್ರೆಸ್‌ಗಳು, ಟ್ರಿಪ್‌ಗಳ ಪೋಟೋಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.

ಬಹುತೇಕ ಎಲ್ಲಾ ಚಿತ್ರಗಳಲ್ಲಿ ಟ್ರೆಂಡಿ ಡ್ರೆಸ್‌ಗಳಲ್ಲಿ ಕಾಣಿಸಿಕೊಂಡಿರುವ ಸೈನಾ ನೆಹ್ವಾಲ್ ಸಖತ್ ಹಾಟ್ ಆಗಿ ಫೋಟೋಗೆ ಪೋಸ್ ನೀಡಿದ್ದಾರೆ.
ಬೀಚ್‌ಸೈಡ್‌ನಲ್ಲಿ ನಿಂತಿರುವ, ಬೋಟಿಂಗ್‌ಗೆ ಹೋಗಿರುವ ಚಿತ್ರಗಳನ್ನು ಸೈನಾ ನೆಹ್ವಾಲ್ ತಮ್ಮ ಇನ್ಸ್‌ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಬ್ಯಾಡ್ಮಿಂಟನ್ ಸುಂದರಿ ಸೈನಾ ನೆಹ್ವಾಲ್ ಅವರ ಹಾಟ್ ಅವತಾರ ಕಂಡ ಅಭಿಮಾನಿಗಳು ಕೂಡ ಸಖತ್ ಶಾಕ್ ಆಗಿದ್ದಾರೆ.