Connect with us

    FILM

    ಸಲ್ಮಾನ್ ಖಾನ್ ಕೊಲ್ಲದೇ ಬಿಡುವುದಿಲ್ಲ: ಲಾರೆನ್ಸ್ ಟೀಮ್ ನಿಂದ ಮತ್ತೆ ಬೆದರಿಕೆ

    ಮುಂಬೈ , ಜುಲೈ 13: ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿರುವ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಮತ್ತೆ ಮತ್ತೆ ಬೆದರಿಕೆ ಕರೆಗಳು ಬರುತ್ತಿವೆ ಎನ್ನಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರೆನ್ಸ್ ಸಹಚರರನ್ನು ಬಂಧಿಸಿರುವ ಮುಂಬೈ ಪೊಲೀಸ್ ಅಗತ್ಯ ಮಾಹಿತಿ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಗಾಬರಿ ಹುಟ್ಟಿಸುವಂತಹ ಹೇಳಿಕೆಗಳು ಆ ಟೀಮ್ ನಿಂದ ಬರುತ್ತಿವೆ ಎನ್ನುತ್ತಿವೆ ಮೂಲಗಳು.

    ಈಗಾಗಲೇ ಸಲ್ಮಾನ್ ಖಾನ್ ಗೆ ಪತ್ರ ಬರೆದಿರುವ ಮತ್ತು ಮನೆಯ ಮುಂದೇ ಅವರನ್ನು ಕೊಲ್ಲಲು ಪ್ಲ್ಯಾನ್ ಮಾಡಿರುವ ವಿಷಯವನ್ನು ಲಾರೆನ್ಸ್ ಅಂಡ್ ಟೀಮ್ ಬಹಿರಂಗಪಡಿಸಿದ್ದು, ಈ ಹತ್ಯೆಗಾಗಿ ಗನ್ ಕೂಡ ಖರೀದಿಸಲಾಗಿತ್ತು ಎನ್ನುವ ವಿಷಯವನ್ನು ಬಾಯ್ಬಿಟ್ಟಿದ್ದಾರಂತೆ. ಅಲ್ಲದೇ, ಯಾವುದೇ ಕಾರಣಕ್ಕೂ ಸ‍ಲ್ಮಾನ್ ಖಾನ್ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದೂ ಹೇಳಿದ್ದಾರಂತೆ.

    ಪ್ರತಿ ವರ್ಷವೂ ಸಲ್ಮಾನ್ ಖಾನ್ ಮನೆಯ ಮುಂದೆ ನಿಂತು ಅಭಿಮಾನಿಗಳಿಗೆ ಈದ್ ಶುಭಾಶಯ ಹೇಳುವುದನ್ನು ಸಂಪ್ರದಾಯದಂತೆ ಪಾಲಿಸಿಕೊಂಡು ಬಂದಿದ್ದರು. ಆದರೆ, ಈ ಬಾರಿ ಅವರು ಹಾಗೆ ಮಾಡಲಿಲ್ಲ ಕಾರಣ, ಅಭಿಮಾನಿಗಳ ಮಧ್ಯೆಯ ಆಗಂತುಕರು ಬರಬಹುದು ಎನ್ನುವ ಆತಂಕ. ಮುಂಬೈ ಮತ್ತು ದೆಹಲಿ ಪೊಲೀಸರು ಲಾರೆನ್ಸ್ ಅಂಡ್ ಟೀಮ್ ಬೆನ್ನು ಬಿದ್ದಿದ್ದು, ಹಲವು ಆಘಾತಕಾರಿ ಅಂಶಗಳನ್ನು ಅವರಿಂದ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply