Connect with us

    FILM

    ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ನಟಿ ಸಮಂತಾ….!!

    ಹೈದರಾಬಾದ್ : ತೆಲುಗಿನ ಖ್ಯಾತ ನಟಿ ಸಮಂತಾ ಅವರು ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ತಮಗೆ ಇರುವ ಕಾಯಿಲೆ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ.


    ನಟಿ ಸಮಂತಾ (Samantha) ಅವರು ವಿಚ್ಛೇದನ ಪಡೆದು ಒಂದು ವರ್ಷದ ಮೇಲಾಗಿದೆ. ಕೆಲ ತಿಂಗಳಿಂದ ಸಮಂತಾಗೆ ಅನಾರೋಗ್ಯ ಕಾಡಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಇದಕ್ಕೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಈಗ ಸಮಂತಾ ಈ ವಿಚಾರದ ಬಗ್ಗೆ ಮೌನ ಮುರಿದಿದ್ದಾರೆ. ತಮಗೆ ಅನಾರೋಗ್ಯ ಉಂಟಾಗಿದೆ ಎಂಬ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಈ ಕಾಯಿಲೆ ಹೆಸರನ್ನು ಕೂಡ ಹೇಳಿಕೊಂಡಿದ್ದಾರೆ.


    ಸಮಂತಾ ಅವರಿಗೆ Myositis ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. 30-60ರ ವಯಸ್ಸಿನವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಕೊಡದೆ ಇದ್ದರೆ ದಿನ ಕಳೆದಂತೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಈಗ ಸಮಂತಾ ಕೂಡ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.


    ‘ಯಶೋದಾ ಚಿತ್ರದ ಟ್ರೇಲರ್​ಗೆ ನಿಮ್ಮ ಪ್ರತಿಕ್ರಿಯೆ ನೋಡಿ ಖುಷಿ ಆಯಿತು. ನಿಮ್ಮ ಪ್ರೀತಿ ನನಗೆ ಸವಾಲುಗಳನ್ನು ಎದುರಿಸಲು ಶಕ್ತಿ ನೀಡಿದೆ. ಕೆಲ ತಿಂಗಳ ಹಿಂದೆ ನನ್ನಲ್ಲಿ Myositis ಹೆಸರಿನ ಸಮಸ್ಯೆ ಇರುವುದು ಪತ್ತೆ ಆಯಿತು. ಇದು ಕಡಿಮೆ ಆದ ನಂತರದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಬೇಕು ಎಂದುಕೊಂಡಿದ್ದೆ. ಆದರೆ, ನಾವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸಮಯವನ್ನು ಇದು ತೆಗೆದುಕೊಳ್ಳುತ್ತಿದೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply