ಸಂಪಾಜೆ ಜನವರಿ 29: ಕಾರೊಂದು ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ರಸ್ತೆ ಮೇಲೆ ಬಿದ್ದಿದ್ದು, ಈ ವೇಳೆ ಲಾರಿಯೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಸರಣಿ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ಸಂಭವಿಸಿದೆ.

ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಗುದ್ದಿದೆ. ಈ ವೇಳೆ ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಇನ್ನೊಂದು ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.



