Connect with us

    LATEST NEWS

    ಲಘು ವಾಹನಗಳ ಸಂಚಾರಕ್ಕೆ ಮುಕ್ತವಾದ ಸಂಪಾಜೆ ಘಾಟ್ ?

    ಲಘು ವಾಹನಗಳ ಸಂಚಾರಕ್ಕೆ ಮುಕ್ತವಾದ ಸಂಪಾಜೆ ಘಾಟ್ ?

    ಸುಳ್ಯ ಸೆಪ್ಟೆಂಬರ್ 12: ಕಳೆದ ತಿಂಗಳು ಅಗಸ್ಟ್ ನಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಭೂ ಕುಸಿತಕ್ಕೆ ಸಿಲುಕಿ ಸಂಪೂರ್ಣ ಹಾಳಾಗಿದ್ದ ಸಂಪಾಜೆ ಘಾಟ್ ರಸ್ತೆಯಲ್ಲಿ ಈಗ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಕಳೆದ ತಿಂಗಳು ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ಸಂಪಾಜೆ ಘಾಟ್ ರಸ್ತೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಸಂಪಾಜೆ ಘಾಟ್ ನ ಜೋಡುಪಾಳ ಪರಿಸರದಲ್ಲಿ ಉಂಟಾದ ಭಾರಿ ಭೂಕುಸಿತದಿಂದಾಗಿ ರಸ್ತೆಗೆ ಭಾರೀ ಹಾನಿ ಸಂಭವಿಸಿತ್ತು, ಮಾಣಿ ಮೂಲಕ ಮೈಸೂರು ಸಂಪರ್ಕಿಸುವ ರಸ್ತೆ ಇದಾಗಿದ್ದು, ಭೂಕುಸಿತದಿಂದಾಗಿ ಇಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

    ಇದೀಗ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಈಗ ಸಂಪಾಜೆ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರ ಆರಂಭಿಸಲಾಗಿದೆ, ಇನ್ನು ಕೆಲವೇ ದಿನಗಳಲ್ಲಿ ಘನ ವಾಹನಗಳ ಸಂಚಾರಕ್ಕೂ ಮುಕ್ತವಾಗಲಿದೆ ಎಂದು ಅಂದಾಜಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply