DAKSHINA KANNADA
ಸಂಪಾಜೆ – ಸ್ಕೂಟರ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ – ಸ್ಕೂಟರ್ ಸವಾರರಿಬ್ಬರ ಸಾವು
ಸಂಪಾಜೆ ಡಿಸೆಂಬರ್ 24: ಕಂಟೈನರ್ ಲಾರಿ ಮತ್ತು ಸ್ಕೂಟಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ಸಂಪಾಜೆ ಬಳಿಯ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಚಿದಾನಂದ ಆಚಾರ್ಯ ಎಂದು ಗುರುತಿಸಲಾಗಿದೆ. ಸ್ಕೂಟರ್ ನಲ್ಲಿದ್ದ ಮಹಿಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಹಾಗೂ ಮಡಿಕೇರಿ ಕಡೆಯಿಂದ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾದ ಸಂಭವಸಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಾರಿ ರಸ್ತೆ ಬದಿಯ ತಡೆಗೋಡೆಯನ್ನು ದಾಟಿ ಕಾಡಿನೊಳಗೆ ನುಗ್ಗಿದೆ.