LATEST NEWS
ಕೃಷಿ ಕಾಯ್ದೆ ರದ್ದು: ಪ್ರತಿಭಟನೆ ಹಿಂಪಡೆದ ರೈತರು
ನವದೆಹಲಿ : ಕಳೆದ 15 ತಿಂಗಳಿನಿಂದ ವಿವಾದಿತ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಗುತ್ತಿದೆ ಎಂದು ಸಿಂಘು ಗಡಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ಘೋಷಿಸಿದೆ.
ಡಿಸೆಂಬರ್ 11ರಂದು, ಶನಿವಾರ ದೆಹಲಿ ಗಡಿಯನ್ನು ಖಾಲಿ ಮಾಡುವುದಾಗಿ ಮತ್ತು ಜನವರಿ 15 ರಂದು ಮತ್ತೊಂದು ಸಭೆ ನಡೆಸುವುದಾಗಿ ರೈತರು ಹೇಳಿದ್ದಾರೆ. ಕೇಂದ್ರದ ಪರಿಷ್ಕೃತ ಪ್ರಸ್ತಾವನೆ ಬಂದ ಕೂಡಲೇ, ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸಭೆ ನಡೆಸುವುದಾಗಿ ತಿಳಿಸಿದೆ.
ಕೃಷಿ ಕಾಯ್ದೆಗಳನ್ನು ಹಿಂಪಡೆದ ನಂತರ ಕೇಂದ್ರ ಸರ್ಕಾರವೂ ತಮ್ಮ ಮುಂದೆ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಅದನ್ನು ರೈತರು ಒಪ್ಪಿಕೊಂಡಿದ್ದಾರೆ. ಅವರ ಬೇಡಿಕೆಯನ್ನು ಆಧರಿಸಿ ಕೇಂದ್ರವು ಲಿಖಿತ ಭರವಸೆ ನೀಡಿದೆ.