ಕಡಬ ಫೆಬ್ರವರಿ 19: ಧರ್ಮಸ್ಥಳದ ವಿರುದ್ದ ಅವಹೇಳನಕಾರಿ ವಿಡಿಯೋ ಮಾಡದಂತೆ ಕೋರ್ಟ್ ನಿರ್ಬಂಧ ವಿಧಿಸಿದ್ದರೂ ಪದೇ ಪದೇ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಮರ್ಧಾಳ ಎಂಬಾತನನ್ನು ಬುಧವಾರ ಬಂಧಿಸಿದ್ದಾರೆ. ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೇಪದೆ ಸಂಚಾರಿ ಸ್ಟುಡಿಯೋ ಯೂ ಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿ ಮಾಡಲಾಗಿತ್ತು. ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 30 ದಿನಗಳ ಕಾಲ ಜೈಲು ಶಿಕ್ಷೆ ಆದೇಶ ಹೊರಡಿಸಿತು.
ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಕಡಬಕ್ಕೆ ಆಗಮಿಸಿ ಸಂತೋಷ್ನನ್ನು ಆತನ ಅಂಗಡಿಯಿಂದ ವಶಕ್ಕೆ ಪಡೆದಿದ್ದಾರೆ. ಪೊಲೀಸರು ಬೆಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಜೈಲಿಗೆ ಕಳುಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ವಕೀಲರಾದ ರಾಜಶೇಖರ್ ಹಿಲಿಯಾರು ವಾದ ಮಂಡಿಸಿದ್ದರು.