Connect with us

    LATEST NEWS

    ಉಡುಪಿ ಅಕ್ಟೋಬರ್ 5 ರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಳು ಲಭ್ಯ : ಸಿಇಓ ಪ್ರಸನ್ನ

    ಉಡುಪಿ, ಸೆಪ್ಟಂಬರ್ 20: ಹೊಸ ಮರಳು ನೀತಿಯಲ್ಲಿ ಸೂಚಿಸಿದಂತೆ , ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಳ್ಳ ಮತ್ತು ಕೆರೆಗಳಲ್ಲಿ ಈಗಾಗಲೇ ಗುರುತಿಸಿರುವ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ಅಕ್ಟೋಬರ್ 5 ರಿಂದ ತೆಗೆಯಲು ಸಂಬಂದಪಟ್ಟ ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಧಿಕಾರಿ ಪ್ರಸನ್ನ ಹೆಚ್. ಹೇಳಿದರು.


    ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ತಂತ್ರಾಂಶ ಬಳಕೆ ಬಗ್ಗೆ ಪಂಚಾಯತ್ ಗಳ ಅಧ್ಯಕ್ಷರು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪಿಡಿಓ ಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು. ಹೊಸ ಮರಳು ನೀತಿ 2020 ಮತ್ತು 2021 ರಂತೆ, ಮೊದಲನೇ, ಎರಡನೇ ಮತ್ತು ಮೂರನೇ ಶ್ರೇಣಿಯ ಹಳ್ಳ ಮತ್ತು ತೊರೆಗಳಲ್ಲಿ ಮರಳು ನಿಕ್ಷೇಪಗಳಲ್ಲಿ ಲಭ್ಯವಿರುವ ಮರಳನ್ನು ತೆಗೆಯಲು ಅವಕಾಶ ಕಲ್ಪಿಸಿದ್ದು , ಅದರಂತೆ ಜಿಲ್ಲೆಯ ಕಾರ್ಕಳ, ಹೆಬ್ರಿ, ಕಾಪು, ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ವ್ಯಾಪ್ತಿಯಲ್ಲಿ 35 ಮರಳು ನಿಕ್ಷೇಪಗಳಲ್ಲಿ ಒಟ್ಟು 49903 ಮೆ.ಟನ್ ಪ್ರಮಾಣದ ಮರಳನ್ನು ಗುರುತಿಸಲಾಗಿದ್ದು, ಇದನ್ನು ಅಕ್ಟೋಬರ್ 5 ರಿಂದ ತೆರವುಗೊಳಿಸಲು ಸಂಬಂದಪಟ್ಟ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು. ಮರಳು ನಿಕ್ಷೇಪಗಳನ್ನು ತೆರವುಗೊಳಿಸಲು ಈಗಾಗಲೇ ಪಂಚಾಯತ್ ಗಳಿಗೆ ಆಶಯ ಪತ್ರಗಳನ್ನು ನೀಡಲಾಗಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಹಕರು ಮತ್ತು ಸರ್ಕಾರಿ ಸ್ಥಳೀಯ ಕಾಮಗಾರಿಗಳ ಗುತ್ತಿಗೆದಾರರು , ಸರ್ಕಾರದಿಂದ ನಿಗಧಿಪಡಿಸಿದ ಗರಿಷ್ಠ ಮಾರಾಟದರವನ್ನು ಗ್ರಾಮ ಪಂಚಾಯತ್ ಗಳಿಗೆ ಪಾವತಿಸಿ , ರವಾನೆ ಪರವಾನಗಿ ಪಡೆದು , ಕಡಿಮೆ ಭಾರ ಹೊರುವ ಸಾಮರ್ಥ್ಯದ ವಾಹನಗಳಲ್ಲಿ ಮರಳನ್ನು ಸ್ವಂತ ಖರ್ಚಿನಲ್ಲಿ ತುಂಬಿಸಿ ಸಾಗಾಟ ಮಾಡಬಹುದು ಎಂದರು.
    ಗ್ರಾಮ ಪಂಚಾಯತ್ ಗಳು ಗ್ರಾಹಕರಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ರಾಜಧನ ಹಾಗೂ ಅನ್ವಯವಾಗುವ ಇತರೆ ಶುಲ್ಕಗಳನ್ನು ಸ್ವೀಕರಿಸಿ, ವಿಶೇಷ ರಕ್ಷಣಾತ್ಮಕವುಳ್ಳ ಸಾಗಾಣಿಕೆ ಪರವಾನಗಿಯನ್ನು ಗ್ರಾಹಕರಿಗೆ ನೀಡಬೇಕು ಈ ಕುರಿತಂತೆ ಅಗತ್ಯವಿರುವ ಎಲ್ಲಾ ರೀತಿಯ ತಾಂತ್ರಿಕ ತರಬೇತಿ ಮತ್ತು ನೆರವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಪಡೆಯುವಂತೆ ತಿಳಿಸಿದರು.

    Share Information
    Advertisement
    Click to comment

    Leave a Reply

    Your email address will not be published. Required fields are marked *