LATEST NEWS
ವೇದವ್ಯಾಸ್ ಗೆ ದಿನೇಶ್ ಗುಂಡೂರಾವ್ ತಿರುಗೇಟು – ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ಒಂದೂ ಕೆಲಸ ಮಾಡಿಲ್ಲ
ಮಂಗಳೂರು ನವೆಂಬರ್ 6 : ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರ ದೃಷ್ಠಿಯ ಒಂದೂ ಕೆಲಸ ಮಾಡಿಲ್ಲ ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಶಾಸಕ ವೇದವ್ಯಾಸ್ ಕಾಮತ್ ವಿರುದ್ದ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ರಾಜ್ಯ ಸರಕಾರದ ವಿರುದ್ದ ಶಾಸಕ ವೇದವ್ಯಾಸ್ ಕಾಮತ್ ಆರೋಪಗಳ ಸುರಿಮಳೆ ಮಾಡಿದ್ದರು. ಕಾಂಗ್ರೇಸ್ ಸರಕಾರ ಬಂದ ಮೇಲೆ ಮರಳಿನ ಸಮಸ್ಯೆ ಪರಿಹಾರಕ್ಕೆ ಯಾವುದೇ ಕೆಲಸ ಮಾಡಿಲ್ಲ ಎಂದು ವೇದವ್ಯಾಸ್ ಕಾಮತ್ ಆರೋಪಿಸಿದ್ದರು, ಇದೀಗ ವೇದವ್ಯಾಸ್ ಕಾಮತ್ ಆರೋಪಕ್ಕೆ ಟ್ವೀಟರ್ ಖಾತೆಯಲ್ಲಿ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆ ಕಾಂಗ್ರೆಸ್ ಸರ್ಕಾರ ಸೃಷ್ಟಿ ಮಾಡಿರುವುದಲ್ಲ.ಕಳೆದ 4 ವರ್ಷಗಳಿಂದ ನಿಮ್ಮದೇ ʻಡಬಲ್ ಇಂಜಿನ್ʼ ಸರ್ಕಾರವಿತ್ತು. ಶಾಸಕರು, ಸಚಿವರು, ಸಂಸದರು ಬಿಜೆಪಿಯವರೇ ಆಗಿದ್ದರು. ನಿಮ್ಮ ಅವಧಿಯಲ್ಲೇ ನಿಮಗೆ ಮರಳು ಗಣಿಗಾರಿಕೆ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಉಸ್ತುವರಿ ಸಚಿವ ದಿನೇಶ್ ಗುಂಡೂರಾವ್ ಶಾಸಕ ವೇದವ್ಯಾಸ್ ಕಾಮತ್ ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ ಅವರು,ಜನರ ಮುಂದೆ ನೂರು ಬಾರಿ ಸುಳ್ಳು ಹೇಳಿ, ಅದೇ ಸತ್ಯ ಎಂಬಂತೆ ಬಿಂಬಿಸುವ ಚಾಳಿ ನಿಮ್ಮದು. ಅಧಿಕಾರ ಸಿಕ್ಕಾಗ ದೋಚಿದ್ದು ಬಿಟ್ಟರೆ ದೂರದೃಷ್ಠಿಯ ಒಂದೂ ಕೆಲಸ ಮಾಡಿಲ್ಲ. ಈಗ ದಿಢೀರನೇ ಗಾಢ ನಿದ್ದೆಯಿಂದ ಎಚ್ಚೆತ್ತು, ಕಾಂಗ್ರೆಸ್ ದೂರುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ನಿಮ್ಮದೇ ಸರ್ಕಾರದ ಅವಧಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆಯಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿತ್ತು.ಆದರೆ ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕರಾಕ್ಕೇರಿದ ಬಳಿಕ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಗೆ ಹೊಸ ಡಯಾಲಿಸಿಸ್ ಯಂತ್ರಗಳ ಪೂರೈಕೆ ಮತ್ತು ನಿರ್ವಹಣೆಗಾಗಿ ಹೊಸ ಟೆಂಡರ್ ಕರೆಯಲಾಗಿದೆ ಎಂದರು. ನಿಮ್ಮ ರಾಜಕೀಯ ಸೇಡಿನ ಆರೋಪದ ಹೊರತಾಗಿಯೂ ದಕ್ಷಿಣ ಕನ್ನಡ ಜಿಲ್ಲೆಯ ಮರಳಿನ ಸಮಸ್ಯೆಯನ್ನು ಪರಿಹರಿಸಲು ನಮ್ಮ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಹೇಳಿದರು.
You must be logged in to post a comment Login