LATEST NEWS
ಸ್ಯಾನಿಟರಿ ಪ್ಯಾಡ್ ನಲ್ಲಿ 2 ಕೆಜಿ ಚಿನ್ನ ಅಕ್ರಮ ಸಾಗಾಟ – ಮಹಿಳೆ ಆರೆಸ್ಟ್
ಮಂಗಳೂರು ಮಾರ್ಚ್ 11: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಭೇಟೆಯಾಡಿದ್ದು, ಬರೋಬ್ಬರಿ 1.10 ಕೋಟಿ ಮೌಲ್ಯ ಅಕ್ರಮ ಚಿನ್ನ ಸಾಗಾಟ ಪ್ರಕರಣವನ್ನು ಭೇದಿಸಿದ್ದು, ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ನಡೆದ ಅತಿ ದೊಡ್ಡ ಕಾರ್ಯಾಚರಣೆಯೊಂದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಸ್ಯಾನಿಟರಿ ಪ್ಯಾಡ್ ಮತ್ತು ಸಾಕ್ಸ್ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಕಾಸರಗೋಡಿನ ಸಮೀರಾ ಎಂದು ಗುರುತಿಸಲಾಗಿದೆ. ಈಕೆ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದಳು. ಈಕೆಯನ್ನು ತಪಾಸಣೆ ನಡೆಸಿದಾಗ ಒಳ ಉಡುಪಿನಲ್ಲಿ ಮತ್ತು ಸಾಕ್ಸ್ನಲ್ಲಿ ಚಿನ್ನ ಬಚ್ಚಿಟ್ಟುಕೊಂಡು ಪ್ರಯಾಣ ಮಾಡಿರುವುದು ಪತ್ತೆಯಾಗಿದೆ. ಬಂಧಿತ ಮಹಿಳೆಯಿಂದ 1 ಕೋಟಿ 10 ಲಕ್ಷ ರೂ. ಮೌಲ್ಯದ 2.41 ಕೆ.ಜಿ ಚಿನ್ನ ಹಾಗೂ ವಿದೇಶಿ ಸಿಗರೇಟುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕೋಪ್ಟಾ ಕಾಯ್ದೆ ಉಲ್ಲಂಘನೆ ಪ್ರಕರಣವನ್ನು ದಾಖಲಿಸಲಾಗಿದೆ.