Connect with us

DAKSHINA KANNADA

ಪ್ರಧಾನಿ ಕಾರ್ಯಕ್ರಮಕ್ಕೆ ಪುತ್ತೂರಿನಿಂದ 25 ಸಾವಿರ ಮಂದಿ

ಪುತ್ತೂರು ಅಗಸ್ಟ್ 27: ಸೆಪ್ಟೆಂಬರ್ 2 ರಂದು ಮಂಗಳೂರಿನಲ್ಲಿ ನಡೆಯಲಿರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಒಟ್ಟು 25 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.


ಪ್ರಧಾನಮಂತ್ರಿಯವರ ಕಾರ್ಯಕ್ರಮದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ 10 ಸಾವಿರ ಫಲಾನುಭವಿಗಳು ಹಾಗೂ 15 ಸಾವಿರ ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಪ್ರಧಾನಿ ಕಾರ್ಯಕ್ರಮಕ್ಕೆ ತೆರಳುವ ಫಲಾನುಭವಿಗಳಿಗೆ ವಾಹನ ಸೌಲಭ್ಯ ಹಾಗೂ ಊಟೋಪಚಾರದ ವ್ಯವಸ್ಥೆಯನ್ನು ತಾಲ್ಲೂಕು ಹಾಗೂ ಜಿಲ್ಲಾಡಳಿತ ಮಾಡಲಿದೆ. ಪಕ್ಷದ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ವಾಹನ ಸೌಲಭ್ಯ ಹಾಗೂ ಊಟದ ವ್ಯವಸ್ಥೆಯನ್ನು ಪಕ್ಷದ ವತಿಯಿಂದ ಮಾಡಲಾಗುವುದು ಎಂದು ಹೇಳಿದರು.

ತಾಲ್ಲೂಕಿನ 220 ಬೂತ್‌ಗಳಿಂದ ಕನಿಷ್ಠ 15,000 ಮಂದಿ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ. ಅವರನ್ನು ಕರೆದೊಯ್ಯಲು 75 ಖಾಸಗಿ ಬಸ್‌ಗಳು, 100 ಕೆಎಸ್‌ಆರ್‌ಟಿಸಿ ಬಸ್‌ಗಳು ಹಾಗೂ ಮಿನಿ ಬಸ್‌ಗಳನ್ನು ಬಳಸಲಾಗುವುದು. ಜತೆಗೆ ಸುಮಾರು 400ರಷ್ಟು ಖಾಸಗಿ ವಾಹನಗಳು ಇರಲಿವೆ ಎಂದು ಅವರು ಮಾಹಿತಿ ನೀಡಿದರು.

Advertisement
Click to comment

You must be logged in to post a comment Login

Leave a Reply