LATEST NEWS
ಸಚಿವ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ

ಉಡುಪಿ ಎಪ್ರಿಲ್ 12: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂತೋಷ್ ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದರು.
ಬೆಳಗಾವಿ ಜಿಲ್ಲೆ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರೂ ಆಗಿರುವ ಸಂತೋಷ್ ಪಾಟೀಲ ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆ್ಯಪ್ ಸಂದೇಶ ಕಳುಹಿಸಿ ನಾಪತ್ತೆಯಾಗಿದ್ದ ಸಂತೋಷ್ ಪಾಟೀಲ ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಉಳಿದುಕೊಂಡಿದ್ದರು.

ಅವರ ಮೊಬೈಲ್ ಲೊಕೇಷನ್ ಆಧಾರದ ಮೇಲೆ ಲಾಡ್ಜ್‌ಗಳಲ್ಲಿ ತಪಾಸಣೆ ನಡೆಸಿದಾಗ ಶಾಂಭವಿ ಲಾಡ್ಜ್‌ನಲ್ಲಿ ಸಂತೋಷ್ ಪಾಟೀಲ ಮೃತದೇಹ ಪತ್ತೆಯಾಗಿದೆ.