LATEST NEWS
ಬೆಂಗಳೂರು ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು ಬಿಜೆಪಿ ಕಾರ್ಯಕರ್ತನ ಹತ್ಯೆ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ
ಮಂಗಳೂರು ಫೆಬ್ರವರಿ 2: ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತನ ಕೊಲೆ ಖಂಡಿಸಿ ಬಿಜೆಪಿ ಬೀದಿಗಿಳಿದಿದೆ. ಇಂದು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಔರಂಗಜೇಬನ ಆಡಳಿತ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಅಧಿಕಾರಕ್ಕಾಗಿ ಕಾಂಗ್ರೆಸ್ ಕೀಳುಮಟ್ಟದ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು. ಕಾಂಗ್ರೆಸ್ ನ ಕುಮ್ಮಕ್ಕಿನಿಂದಲೇ ಸಂತೋಷ್ ಕೊಲೆ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಧಿಕ್ಕಾರದ ಕೂಗಿದರು.

ಸ್ಕ್ರೂ ಡ್ರೈವರಿನಿಂದ ಕೊಲೆ ಹೇಳಿಕೆ ನೀಡಿದ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ಹಾಸ್ಯಾಸ್ಪದ ಎಂದು ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು ಸಂತೋಷ ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂದಿಸಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಸಂತೋಷ್ ಕುಟುಂಬಕ್ಕೆ ೫೦ ಲಕ್ಷ ರೂ. ಪರಿಹಾರ ನೀಡಬೇಕು ಆಗ್ರಹಿಸಿದ ಬಿಜೆಪಿ ಕಾರ್ತಕರ್ತರು ಸಂತೋಷ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ಒದಗಿಸಬೇಕು ಒತ್ತಾಯಿಸಿದರು.