Connect with us

KARNATAKA

ಸಾಂಟ್ರೋ ರವಿ ಗುಜರಾತ್ ನಲ್ಲಿ ಅರೆಸ್ಟ್….!!

ಮೈಸೂರು ಜನವರಿ 13: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಾಂಟ್ರೋ ರವಿಯನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್‌.ಮಂಜುನಾಥ್ ಅಲಿಯಾಸ್‌ ಸ್ಯಾಂಟ್ರೊ ರವಿಯನ್ನು ಮೈಸೂರು ಪೊಲೀಸರು ಗುಜರಾತ್‌ನಲ್ಲಿ ಶುಕ್ರವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.


ಪ್ರಕರಣ ದಾಖಲಾಗಿ ಹತ್ತು ದಿನಗಳ ನಂತರ ಆರೋಪಿಯನ್ನು ಬಂಧಿಸಲಾಗಿದೆ. 2ನೇ ಪತ್ನಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ವಿವಿಧ ತಂಡಗಳನ್ನು ರಚಿಸಿ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ವಿವಾಹಿತ ಎಂಬುದನ್ನು ಮುಚ್ಚಿಟ್ಟು, ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ ಮದುವೆಯಾಗಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿ, ವರದಕ್ಷಿಣೆ ಕಿರುಕುಳ ನೀಡಿ, ಸುಳ್ಳು ಪ್ರಕರಣ ದಾಖಲಿಸಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿತ್ತು. ನಗರದ ಸಂತ್ರಸ್ತ ಮಹಿಳೆ ಹಾಗೂ ಅವರ ಕುಟುಂಬದ ಸದಸ್ಯರು ಒಡನಾಡಿ ಸೇವಾ ಸಂಸ್ಥೆಯ ನೆರವು ಪಡೆದು ದೂರು ದಾಖಲಿಸಿದ್ದರು.

 

Advertisement
Click to comment

You must be logged in to post a comment Login

Leave a Reply