FILM
ಯುವ ರಾಜ್‌ಕುಮಾರ್ ಡೈವೋರ್ಸ್ ಕೇಸ್ ನಲ್ಲಿ ಕಾಂತಾರ ನಟಿ ಸಪ್ತಮಿ ಗೌಡ ಹೆಸರು..?
ಬೆಂಗಳೂರು ಜೂನ್ 11: ಡಾ. ರಾಜ್ ಕುಮಾರ್ ಪ್ಯಾಮಿಲಿಯ ಮೊದಲ ಡೈವೋರ್ಸ್ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ರಾಘವೇಂದ್ರ ರಾಜ್ ಕುಮಾರ್ ಅವರ ಮಗ ಯುವ ರಾಜ್‌ಕುಮಾರ್ ಡೈವೋರ್ಸ್ ಕೇಸ್ ನಲ್ಲಿ ಕಾಂತಾರ ನಟಿ ಸಪ್ತಮಿ ಗೌಡ ಹೆಸರು ಕೇಳಿ ಬಂದಿದೆ.
ಯುವ ರಾಜ್‌ಕುಮಾರ್ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರು ಯುವ ರಾಜ್‌ಕುಮಾರ್ ನಟಿ ಸಪ್ತಮಿ ಗೌಡ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಆರೋಪಿಸಿದ್ದಾರೆ. ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ ಎಂಬುದಾಗಿ ಯುವ ರಾಜ್‌ಕುಮಾರ್ ಪರ ವಕೀಲ ಸಿರಿಲ್ ಪ್ರಸಾದ್ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದಾರೆ. ನಟನ ಲೀಗಲ್ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ. ಆ ಮೂಲಕ ಡಿವೋರ್ಸ್ ಪ್ರಕರಣವೀಗ ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿದೆ.
ಇದೇ ವರ್ಷದ ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್ ನೀಡಿದ್ದಾರೆ. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ. ಯುವ ರಾಜ್‌ಕುಮಾರ್ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದಾರೆ.