Connect with us

MANGALORE

ದ.ಕ ನೂತನ ಜಿಲ್ಲಾಧಿಕಾರಿ ಸೆಂಥಿಲ್ ಅಧಿಕಾರ ಸ್ವೀಕಾರ

ದ.ಕ ನೂತನ ಜಿಲ್ಲಾಧಿಕಾರಿ ಸೆಂಥಿಲ್ ಅಧಿಕಾರ ಸ್ವೀಕಾರ

ಮಂಗಳೂರು, ಅಕ್ಟೋಬರ್ 19 : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಸಶಿಕಾಂತ್ ಸೆಂಥಿಲ್ ಎಸ್. ಅವರು ಇಂದು ಅಧಿಕಾರ ಸ್ವೀಕರಿಸಿದರು.

ಪ್ರಭಾರ ಜಿಲ್ಲಾಧಿಕಾರಿ ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ, ಮಂಗಳೂರು ಸಹಾಯಕ ಆಯುಕ್ತ ರೇಣುಕಾ ಪ್ರಸಾದ್, ಜಿ.ಪಂ. ಉಪಕಾರ್ಯದರ್ಶಿ ಎನ್.ಆರ್. ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಸಶಿಕಾಂತ್ ಸೆಂಥಿಲ್ ಅವರು ಇದುವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರಾಗಿದ್ದರು.

Facebook Comments

comments