DAKSHINA KANNADA
ಶಬರಿಮಲೆ ತೀರ್ಪಿನ ವಿರುದ್ದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ
ಶಬರಿಮಲೆ ತೀರ್ಪಿನ ವಿರುದ್ದ ಪುತ್ತೂರಿನಲ್ಲಿ ಪ್ರತಿಭಟನಾ ಸಭೆ
ಪುತ್ತೂರು ಅಕ್ಟೋಬರ್ 15: ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್ ತೀರ್ಪನ್ನು ಮರ ಪರಿಶೀಲಿಸಬೇಕೆಂದು ಒತ್ತಾಯಿಸಿ ಪುತ್ತೂರು ತಾಲೂಕು ಅಯ್ಯಪ್ಪ ಭಕ್ತ ವೃಂದದ ವತಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆಯ ಮೂಲಕ ಹೊರಟ ಪ್ರತಿಭಟನಾಕಾರರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನಾ ಸಭೆ ನಡೆಸಿದರು. ಧರ್ಮದ ವಿಚಾರದಲ್ಲಿ ನ್ಯಾಯಾಲಯದ ಮಧ್ಯಪ್ರವೇಶವನ್ನು ವಿರೋಧಿಸಿದ ಪ್ರತಿಭಟನಾಕಾರರು ಸುಪ್ರೀಕೋರ್ಟ್ ಶಬರಿಮಲೆ ಬಗ್ಗೆ ನೀಡಿದ ತೀರ್ಪನ್ನು ಮರು ಪರಿಶೀಲಿಸಬೇಕೆಂದು ಒತ್ತಾಯಿಸಿದರು.
ಕೇರಳ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸರಕಾರ ಕೂಡಲೇ ಹೊಸ ಆಧ್ಯಾದೇಶವನ್ನು ಹೊರಡಿಸಿ ನಿರ್ಧಿಷ್ಟ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ನಿಷೇಧ ಹೇರಬೇಕು. ಈ ಹಿಂದೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಮದ್ಯದಂಗಡಿಗಳನ್ನು ಮುಚ್ಚಬೇಕೆಂದು ತೀರ್ಪು ನೀಡಿದಾಗ ಕೂಡಲೇ ಕಾರ್ಯಪ್ರವೃತ್ತವಾದ ಸರಕಾರ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳನ್ನು ಡಿನೋಟಿಫೈ ಮಾಡುವ ಮೂಲಕ ಮದ್ಯದಂಗಡಿಗೆ ಅನುಕೂಲ ಮಾಡಿಕೊಟ್ಟಿತ್ತು.
ಇಡೀ ಕೇರಳ ಸರಕಾರವೇ ಅಯ್ಯಪ್ಪ ಸ್ವಾಮೀಜಿ ಭಕ್ತರು ಹಾಕುವ ಹುಂಡಿ ಹಣ ಹಾಗೂ ಯಾತ್ರೆಯ ಮೂಲಕ ಮಾಡುವಂತಹ ವ್ಯವಹಾರಗಳಿಂದಲೇ ಕೇರಳ ಸರಕಾರ ನಡೆಯುತ್ತಿದ್ದು, ಕೇರಳ ಸರಕಾರಕ್ಕೆ ಅಯ್ಯಪ್ಪ ಭಕ್ತರ ಖುಣವಿದೆ ಎಂದು ಪ್ರತಿಭಟನೆಯನ್ನು ಉದ್ಧೇಶಿಸಿ ಉಪನ್ಯಾಸಕ ರೋಹಿಣಾಕ್ಷ ಶಿರ್ಲಾಲು ಹೇಳಿದರು.