Connect with us

    LATEST NEWS

    ಸಯ್ಯದ್ ಮದನಿ ದರ್ಗಾದ ಉರೂಸ್ -ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಪ್ರವೇಶ ನಿಷೇಧ

    ಮಂಗಳೂರು ಫೆಬ್ರವರಿ 11: ಉಳ್ಳಾಲದ ಇತಿಹಾಸ ಪ್ರಸಿದ್ದ ಸಯ್ಯದ್ ಮದನಿ ದರ್ಗಾದ ಉರೂಸ್ (Sayyid Madani DargaUroos) ಕಾರ್ಯಕ್ರಮ ಹಿನ್ನೆಲೆ ಮಂಗಳೂರಿನ ಉಳ್ಳಾಲ ಭಾಗದ ಬೀಚ್ ಗಳಿಗೆ ಸಂಜೆ ವೇಳೆ ಪ್ರವೇಶ ನಿರ್ಬಂಧಿಸಲಾಗಿದೆ. 25 ದಿನಗಳ ಕಾಲ ಸಂಜೆ ವೇಳೆ ಪ್ರವೇಶ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಬೀಚ್ ಪ್ರವೇಶ ನಿರ್ಬಂಧಿಸಲಾಗಿದೆ.


    ಉಳ್ಳಾಲದ ಸಯ್ಯದ್ ಮದನಿ ದರ್ಗಾದಲ್ಲಿ ವಾರ್ಷಿಕ ಉರೂಸ್ ನಡೆಯುವುದರಿಂದ ಫೆಬ್ರವರಿ 10 ರಿಂದ ಮಾರ್ಚ್ 6 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಉಳ್ಳಾಲ ಮತ್ತು ಸೋಮೇಶ್ವರ ಬೀಚ್‌ಗಳಿಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.


    ಕಾರ್ಯಕ್ರಮದಲ್ಲಿ ಅನೇಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಸ್ಥಳದಲ್ಲಿ ಜಾಗರಣೆ ಮಾಡಲಾಗುತ್ತಿದ್ದು, ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಲಾಗಿದೆ. ಉಳ್ಳಾಲ, ಉಳಿಯ, ನೆಹರೂ ನಗರ, ಸೋಮೇಶ್ವರ, ಉಚ್ಚಿಲ, ಮೊಗವೀರಪಟ್ಣ, ಪೆರಿಬೈಲ್, ಬಟ್ಟಪ್ಪಾಡಿ ಬೀಚ್‌ಗಳಲ್ಲಿ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ. ಇನ್ನು ಕೋವಿಡ್ ನಿಯಮಗಳನ್ನು ಪಾಲಿಸುವುದನ್ನು ಮೇಲ್ವಿಚಾರಣೆ ಮಾಡಲು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರನ್ನು ಸೆಕ್ಟರ್ ಮ್ಯಾಜಿಸ್ಟ್ರೇಟ್ ಆಗಿ ನೇಮಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply