KARNATAKA
ಮಡಿಕೇರಿ : ಮರಕ್ಕೆ ಢಿಕ್ಕಿ ಹೊಡೆದ ಶಾಲಾ ಮಕ್ಕಳಿದ್ದ KSRTC ಬಸ್: ತಪ್ಪಿದ ಅನಾಹುತ..!
ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳೇ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ.
ಮಡಿಕೇರಿ : ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳೇ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಕೊಡಗಿನ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ.
ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ KSRTC ಬಸ್ ಕುಂಬಾರಗಡಿಗೆ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಢಿಕ್ಕಿಯಾಗಿದೆ.
ಬಸ್ ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳೆ ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮರಕ್ಕೆ ಢಿಕ್ಕಿಯಾಗದೆ ಮುಂದೆ ಚಲಿಸಿದಲ್ಲಿ ಬಸ್ 50 ಅಡಿ ಪ್ರಪಾತಕ್ಕೆ ಉರುಳಿ ಬೀಳುವ ಆತಂಕ ಎದುರಾಗಿತ್ತು.
ಸೂರ್ಲಬ್ಬಿ ರಸ್ತೆ ಕಿರಿದಾಗಿದ್ದು, ತಿರುವುಗಳೇ ಹೆಚ್ಚಾಗಿರುವ ಇಲ್ಲಿ ಯಾವುದೇ ನಾಮಫಲಕ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.