ಅಯೋಧ್ಯೆ ತೀರ್ಪಿನ ಹಿನ್ನಲೆ ಉಡುಪಿ ,ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು ನವೆಂಬರ್ 8 : ಅಯೋಧ್ಯೆ ತೀರ್ಪಿನ ಹಿನ್ನಲೆ ನಾಳೆ ನವೆಂಬರ್ 11 ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ಅಂತಿಮ ತೀರ್ಪು ಹೊರ ಬರಲಿದೆ ಈ ಹಿನ್ನಲೆಯಲ್ಲಿ ಭದ್ರತಾ ದೃಷ್ಠಿಯಿಂದ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆಧೇಶಿಸಿದ್ದಾರೆ.
ಇತ್ತ ಉಡುಪಿ ಜಿಲ್ಲೆಯಲ್ಲೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

Facebook Comments

comments