LATEST NEWS
ಆರೆಂಜ್ ಅಲರ್ಟ್ – ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ(ಜುಲೈ 6) ಶಾಲೆ – ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು ಜುಲೈ 5: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಸತತ ಮೂರನೆ ದಿನವೂ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನಲೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ.6ರ ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.
ಇನ್ನು ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
