LATEST NEWS
ದಕ್ಷಿಣಕನ್ನಡದಲ್ಲಿ ಕೊರೊನಾ ಹೆಚ್ಚಳ- ಪ್ರೌಢಶಾಲೆ ಆರಂಭ ಅಗಸ್ಟ್ 28ರ ವರೆಗೆ ತಾತ್ಕಾಲಿಕ ಮುಂದೂಡಿಕೆ
ಮಂಗಳೂರು ಅಗಸ್ಟ್ 19: ರಾಜ್ಯ ಸರಕಾರ ಇದೇ ತಿಂಗಳ 23 ರಿಂದ 9 ಮತ್ತು 10ನೇ ತರಗತಿಗಳನ್ನು ಪ್ರಾರಂಭಿಸಲು ಸೂಚಿಸಿದೆ. ಆದರೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಏರಿಕೆಯಲ್ಲಿರುವ ಕಾರಣ ಅಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಸದ್ಯ ದಕ್ಷಿಣಕನ್ನಜ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವುದರಿಂದ ಜಿಲ್ಲಾಧಿಕಾರಿಗಳ ನಿರ್ದೇಶನದನುಸಾರ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಗೆ ಅನ್ವಯವಾಗುವಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸುವುದನ್ನು ಆಗಸ್ಟ್ 28 ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಶಿಕ್ಷಕರು ಆನ್‍ಲೈನ್ ಮೂಲಕ ಶೈಕ್ಷಣಿಕ ಚಟುವಟಿಕೆ ನಡೆಯಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿ