Connect with us

KARNATAKA

ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಬ್ಲಾಕ್‌ ಮೇಲ್- ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ..!

Share Information

ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಚಾಮರಾಜನಗರ : ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ.

ಅದ್ಬುಲ್ ಅಸೀಮ್ ಮತ್ತು ಸಂತ್ರಸ್ತೆ ಏಳು ವರ್ಷಗಳಿಂದ ಪರಿಚಿತರಾಗಿದ್ದರು.

ಎರಡು ವರ್ಷಗಳ ಹಿಂದೆ ಮಹಿಳೆ ಬೇರೊಬ್ಬರನ್ನು ಮದುವೆಯಾಗಿದ್ದರು. ಹೀಗಾಗಿ, ಪತಿಯನ್ನು ಬಿಟ್ಟು ತನ್ನೊಂದಿಗೆ ಬರುವಂತೆ ಆರೋಪಿ ಸಂತ್ರಸ್ತೆ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.

ಪತಿಯನ್ನು ಬಿಟ್ಟು ಬಾರದಿದ್ದರೆ ಆಕೆಯ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಆರೋಪಿ ಅಬ್ದುಲ್ ಅಸೀಮ್ ತನ್ನ ಸಹಚರ ಮಯೂರ್ ಜೊತೆಗೆ ಆಕೆಯ ಖಾಸಗಿ ವಿಡಿಯೋಗಳನ್ನು ಮಹಿಳೆಯ ಪತಿ ಮತ್ತು ಕುಟುಂಬ ಸದಸ್ಯರಿಗೆ ಕಳುಹಿಸಿದ್ದ.

ಗಂಡನನ್ನು ಬಿಟ್ಟು ಬಾರದಿದ್ದರೆ ಹಿಂದೂ-ಮುಸ್ಲಿಂ ಸಂಘರ್ಷಕ್ಕೂ ನಾಂದಿ ಹಾಡುವುದಾಗಿ ಬೆದರಿಕೆ ಹಾಕಿದ್ದ.

ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಬಾರದು ಎಂದಾದರೆ 10 ಲಕ್ಷ ರೂ. ನೀಡಬೇಕು ಎಂದು ಬೇಡಿಕೆ ಇಟ್ಟಿದ್ದನು.

ಹಣ ನೀಡದಿದ್ದಲ್ಲಿ ಆಕೆಯ ಖಾಸಗಿ ವಿಡಿಯೋದ ದೃಶ್ಯಗಳ ಬ್ಯಾನರ್‌ಗಳನ್ನು ಆ ಪ್ರದೇಶದಲ್ಲಿ ಹಾಕುವುದಾಗಿ ಆರೋಪಿ ಬೆದರಿಕೆಯೊಡ್ಡಿದ್ದ.

ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.


Share Information
Advertisement
Click to comment

You must be logged in to post a comment Login

Leave a Reply