Connect with us

LATEST NEWS

ಬಸ್ ಹರಿದು ಸ್ಕೂಟರ್ ಸವಾರ ಸಾವು

ಮಂಗಳೂರು ಎಪ್ರಿಲ್ 14: ಕಾರು ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ರಸ್ತೆಗೆಸೆಯಲ್ಪಟ್ಟು, ಬಸ್ ಅಡಿ ಸಿಲುಕಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಧಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರು ಬಳಿ ಸಂಭವಿಸಿದೆ.


ಲೆನ್ಸ್‌ ಕಾರ್ಟ್‌.ಕಾಂ ಸಂಸ್ಥೆಯ ಆಪ್ಟಮೆಟ್ರಿಸ್ಟ್ ಆಗಿರುವ ಗುರಗಾಂವ್ ನಿವಾಸಿ ಧೀಮಂತ್ ರಬೀಂದ್ರ ಮೃತ ವ್ಯಕ್ತಿ. ಮಂಗಳೂರು ಕಡೆಗೆ ತೆರಳುವ ಸಂದರ್ಭ ಕಾರೊಂದು ಇವರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಬಸ್ ಚಲಿಸಿದೆ. ಗಂಭೀರ ಗಾಯಗೊಂಡಿರುವ ಧೀಮಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.